ಸಾರ್ವಜನಿಕರಿಗೆ ಕುಡಿವ ನೀರಿಗೆ ಸಮಸ್ಯೆಯಾಗದಿರಲಿ

ಹೊಸಪೇಟೆಯಲ್ಲಿ ಮಂಗಳವಾರ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಮ್ ಷಾ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ಎಸ್.ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಇತರರಿದ್ದರು.
ಹೊಸಪೇಟೆಯಲ್ಲಿ ಮಂಗಳವಾರ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಮ್ ಷಾ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ಎಸ್.ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಗತಿ ಪರಿಶೀಲನಾ ಸಭೆ ಜಿಪಂ ಸಿಇಒ ಸೂಚನೆ
ಹೊಸಪೇಟೆ: ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜನ, ಜಾನುವಾರುಗಳಿಗೆ ಕುಡಿವ ನೀರಿನ ಅಭಾವ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಜಿ.ಪಂ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಮ್ ಷಾ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನಳದ ಸಂಪರ್ಕ ಕಲ್ಪಿಸುವ ನೀರು ಪೂರೈಕೆ ಮಾಡಲಾಗುತ್ತದೆ. ವಿವಿಧ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಅಪೂರ್ಣಗೊಂಡಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕು. ಬಾಕಿ ಇರುವ ಪೈಪ್‌ಲೈನ್ ಅಳವಡಿಕೆ ಹಾಗೂ ಟ್ಯಾಂಕ್ ನಿರ್ಮಾಣ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಬೇಸಿಗೆ ಆರಂಭವಾಗಿರುವುದರಿAದ ಅಂತರ್ಜಲ ಮಟ್ಟ ಕುಸಿದಿರುವ ಹಳ್ಳಿಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ದುರಸ್ತಿಗೆ ಬಂದ ಕೈಪಂಪುಗಳನ್ನು ನಿರ್ಲಕ್ಷ್ಯವಹಿಸದೇ ತ್ವರಿತವಾಗಿ ದುರಸ್ತಿಗೊಳಿಸಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಿರುತ್ತದೆ. ಆದ್ದರಿಂದ ನೀರಿನ ಮೂಲಗಳ ಸ್ವಚ್ಛ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ನಿರ್ಲಕ್ಷ್ಯ ವಹಿಸುವ ಅಥವಾ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಚ್ಚರಿಕೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net