ತಂಬಾಕು ಮುಕ್ತ ಜಿಲ್ಲೆಯನ್ನಾಗಿಸೋಣ

ಹೊಸಪೇಟೆಯಲ್ಲಿ ಸೋಮವಾರ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಚಾಲನೆ ನೀಡಿದರು. ಜಿಲ್ಲಾ ವೈದ್ಯಾಧಿಕಾರಿಗಳಾದ ಜಂಬಯ್ಯ, ಡಾ.ಷಣ್ಮುಖ ನಾಯ್ಕ, ಡಾ.ವಿನಯ್, ಡಾ.ರಾಧಿಕಾ, ಟಿಎಚ್‌ಒ ಡಾ.ವಿನೋದ್, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣದೇವರಾಯುಲು ಇತರರಿದ್ದರು.
ಹೊಸಪೇಟೆಯಲ್ಲಿ ಸೋಮವಾರ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಚಾಲನೆ ನೀಡಿದರು. ಜಿಲ್ಲಾ ವೈದ್ಯಾಧಿಕಾರಿಗಳಾದ ಜಂಬಯ್ಯ, ಡಾ.ಷಣ್ಮುಖ ನಾಯ್ಕ, ಡಾ.ವಿನಯ್, ಡಾ.ರಾಧಿಕಾ, ಟಿಎಚ್‌ಒ ಡಾ.ವಿನೋದ್, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣದೇವರಾಯುಲು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಎಚ್‌ಓ ಡಾ.ಎಲ್.ಆರ್.ಶಂಕರ್ ನಾಯ್ಕ್ ಕರೆ
ಹೊಸಪೇಟೆ: ತಂಬಾಕು ಸೇವನೆಯು ಕೇವಲ ಒಬ್ಬ ವ್ಯಕ್ತಿಯ ಆರೋಗ್ಯ ಹಾಳುಗೆಡವುದಲ್ಲದೆ, ಇಡೀ ಕುಟುಂಬ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಂಕಷ್ಟಕ್ಕೆ ಸಿಲುಕಿ ಬೀದಿಪಾಲು ಮಾಡುತ್ತದೆ ಎಂದು ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಕರೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಮುಂದೆ ಸೋಮವಾರ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಆಕರ್ಷಣೆಯನ್ನು ಬಹಿರಂಗಪಡಿಸುವುದು - ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಪ್ರಸ್ತುತ ಸುಮಾರು 80 ಲಕ್ಷ ಕ್ಯಾನ್ಸರ್ ಪ್ರಕರಣಗಳಿದ್ದು, ಅದರಲ್ಲಿ 70 ಲಕ್ಷ ಪುರುಷರು ಹಾಗೂ 10 ಲಕ್ಷ ಮಹಿಳೆಯರು ಈ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಪ್ರತಿ ವರ್ಷ ಸುಮಾರು 200 ರಿಂದ 250 ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ.
ಪ್ರಮುಖವಾಗಿ ಯುವ ಪೀಳಿಗೆ ಹಾಗೂ ಶ್ರಮಿಕ ವರ್ಗದವರಲ್ಲಿ ಬಾಯಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ರೋಗ ಉಲ್ಬಣಗೊಂಡು ಅನೇಕ ಯುವಕರಿಗೆ ಬಾಯಿ ತೆರೆಯಲು ಸಾಧ್ಯವಾಗದಂತಹ ದಾರುಣ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಯುವ ಪೀಳಿಗೆಯನ್ನು ಈ ತಂಬಾಕು ವ್ಯಸನದಿಂದ ಸಂಪೂರ್ಣ ಮುಕ್ತಗೊಳಿಸಬೇಕಿದೆ. ಇದು ಕೇವಲ ಆರೋಗ್ಯ ಇಲಾಖೆಯೊಂದರ ಜವಾಬ್ದಾರಿಯಲ್ಲ. ಸರ್ಕಾರದ ಎಲ್ಲಾ ಇಲಾಖೆಗಳು, ಸಂಘ-ಸAಸ್ಥೆಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ ತಂಬಾಕು ನಿಯಂತ್ರಣ ಪ್ರತಿಜ್ಞಾವಿಧಿ ಭೋದಿಸಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಜಂಬಯ್ಯ, ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಕುಟುಂಬ ಕಲ್ಯಾಣಾಧಿಕಾರಿ ಡಾ.ವಿನಯ್, ಕುಷ್ಟರೋಗ ರೋಗ ನಿಯಂತ್ರಣಾಧಿಕಾರಿ ಡಾ.ರಾಧಿಕಾ, ಟಿಎಚ್‌ಒ ಡಾ.ವಿನೋದ್, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣದೇವರಾಯುಲು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net