ಸ್ವಚ್ಛತೆ ಮಹಾತ್ಮರ ಕನಸು ನನಸಾಗಿಸೋಣ

ಹೊಸಪೇಟೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಡಿ.ಪಿ.ಕುಮಾರಸ್ವಾಮಿ, ಪ್ರಶಾಂತ್ ನಾಗಲಾಪುರ, ಎನ್.ಸುಬ್ರಮಣ್ಣ, ರೂಪಾ ಕೆ., ಜೆ.ಚೈತ್ರ, ಶೃತಿ ತೇಲಿ ಇತರರು ಭಾಗವಹಿಸಿದರು.
ಹೊಸಪೇಟೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಡಿ.ಪಿ.ಕುಮಾರಸ್ವಾಮಿ, ಪ್ರಶಾಂತ್ ನಾಗಲಾಪುರ, ಎನ್.ಸುಬ್ರಮಣ್ಣ, ರೂಪಾ ಕೆ., ಜೆ.ಚೈತ್ರ, ಶೃತಿ ತೇಲಿ ಇತರರು ಭಾಗವಹಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸ್ವಚ್ಛತಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಎನ್.ಸುಬ್ರಮಣ್ಣ ಕರೆ
ಹೊಸಪೇಟೆ: ಪ್ರತಿಯೊಬ್ಬ ನಾಗರೀಕರು ಸ್ವಚ್ಛತೆ, ನೈರ್ಮಲ್ಯ ಹಾಗೂ ತ್ಯಾಜ್ಯ ವಿಲೇವಾರಿಕುರಿತುಅರಿವು ಹೊಂದುವ ಮೂಲಕ ಮಹಾತ್ಮ ಗಾಂಧೀಜಿಯವರು ಕಂಡ ಸ್ವಚ್ಛ ಭಾರತದ ಕನಸು ನನಸಾಗಿಸಲು ಕೈಜೋಡಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎನ್.ಸುಬ್ರಮಣ್ಣ ಕರೆ ನೀಡಿದರು.
ರಾಷ್ಟಿçÃಯ ಸ್ವಚ್ಛತಾ ದಿನಾಚರಣೆ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಜಿಲ್ಲಾ ನಗರಾಭಿವೃದ್ದಿ ಕೋಶದ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ ನೆನಪಿಗಾಗಿ ಜ.30 ರಂದು ರಾಷ್ಟಿçÃಯ ಸ್ವಚ್ಛತಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಪ್ರತಿಯೊಬ್ಬರು ಅರಿವು ಹೊಂದಬೇಕು. ತ್ಯಾಜ್ಯವನ್ನು ವಿಂಗಡಿಸುವ ಮೂಲಕ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸನ್ನು ನನಸಾಗಿಸಲು ಪ್ರತಿಯೊಬ್ಬರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದರು.
ನ್ಯಾಯಾಲಯದ ಆವರಣದಲ್ಲಿ ಜರುಗಿದ ಸ್ವಚ್ಛತಾ ಕಾರ್ಯದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶೆ ರೂಪಾ ಕೆ., ಅಪರ ಸಿವಿಲ್ ನ್ಯಾಯಾಧೀಶೆ ಜೆ.ಚೈತ್ರ, 2ನೇ ಅಪರ ಸಿವಿಲ್ ನ್ಯಾಯಾಧೀಶೆ ಶೃತಿತೇಲಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ದೇವರಾಯ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net