ಸಂವಿಧಾನದ ಆಶಯ ಕಾಪಾಡೋಣ

ಹೊಸಪೇಟೆಯಲ್ಲಿ ಸ್ವಾತಂತ್ರö್ಯ ದಿನಾಚರಣೆ ನಿಮಿತ್ತ ತೆರೆದ ವಾಹನದಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಗೌರವ ವಂದನೆ ಸ್ವೀಕರಿಸಿದರು.
ಹೊಸಪೇಟೆಯಲ್ಲಿ ಸ್ವಾತಂತ್ರö್ಯ ದಿನಾಚರಣೆ ನಿಮಿತ್ತ ತೆರೆದ ವಾಹನದಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಗೌರವ ವಂದನೆ ಸ್ವೀಕರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • 80ನೇ ಸ್ವಾತಂತ್ರೊö್ಯÃತ್ಸವ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಚಿವ ಕೆ.ಎಸ್.ಬಸವಂತಪ್ಪ ಕರೆ
ಹೊಸಪೇಟೆ: ದೇಶದ ಏಕತೆ, ಸಮಗ್ರತೆ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡಿಕೊಂಡು ಮುನ್ನಡೆಯುವುದು ಪ್ರತಿಯೊಬ್ಬ ನಾಗರಿಕನ ರ‍್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ‍್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ-ಬಲಿದಾನಗಳನ್ನು ಸ್ಮರಿಸಿ, ಯುವ ರ‍್ನಾಟಕ ಹಾಗೂ ನವಭಾರತ ನರ‍್ಮಾಣದ ಸಂಕಲ್ಪಕ್ಕೆ ಕರೆ ನೀಡಿದ ಅವರು, ದೇಶವು ಹಲವು ಕ್ಷೇತ್ರಗಳಲ್ಲಿ ಗಮನರ‍್ಹ ಸಾಧನೆ ಮಾಡಿದ್ದರೂ ಬಡತನ, ನಿರುದ್ಯೋಗ, ಪರಿಸರ ಮಾಲಿನ್ಯ ಮತ್ತು ಹವಾಮಾನ ವೈಪರೀತ್ಯದಂತಹ ಸವಾಲುಗಳನ್ನು ಎದುರಿಸಲು ಸರ‍್ವಜನಿಕರ ಸಹಭಾಗಿತ್ವ ಅಗತ್ಯ ಎಂದರು.
ಅನ್ನಭಾಗ್ಯ ಯೋಜನೆಯಡಿ 11.60 ಲಕ್ಷ ಫಲಾನುಭವಿಗಳಿಗೆ ಡಿಬಿಟಿ ಮೂಲಕ 285.92 ಕೋಟಿ ರೂ., ಗೃಹಲಕ್ಷ್ಮಿ ಯೋಜನೆಯಡಿ 1,727 ಕೋಟಿ ರೂ., ಗೃಹಜ್ಯೋತಿಯಡಿ 468.26 ಕೋಟಿ ರೂ. ಉಚಿತ ವಿದ್ಯುತ್ ಸೌಲಭ್ಯ ಹಾಗೂ ಯುವನಿಧಿ ಅಡಿ 32.93 ಕೋಟಿ ರೂ. ಧನಸಹಾಯ ನೀಡಲಾಗಿದೆ. ಶಕ್ತಿ ಯೋಜನೆಯಡಿ 430.16 ಕೋಟಿ ರೂ. ವೆಚ್ಚದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಕೊರತೆಯ ನಡುವೆಯೂ 2.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಪಿಎಂ-ಕಿಸಾನ್ ಅಡಿಯಲ್ಲಿ 1.29 ಲಕ್ಷ ರೈತರಿಗೆ 736.12 ಕೋಟಿ ರೂ. ಹಾಗೂ ಬೆಳೆ ವಿಮೆಯಡಿ 66.40 ಕೋಟಿ ರೂ. ಪರಿಹಾರ ಜಮೆ ಮಾಡಲಾಗಿದೆ.
ಕೆಎಂಇಆರ್‌ಸಿಯಿಂದ ಜಿಲ್ಲೆಗೆ 4,107 ಕೋಟಿ ರೂ. ಕಾಯ್ದಿರಿಸಲಾಗಿದ್ದು, ಡಿಎಂಎಫ್ ನಿಧಿಯ 104 ಕೋಟಿ ರೂ. ವೆಚ್ಚದ 250 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆಗೆ ಸಿದ್ಧವಾಗಿದೆ. ನರೇಗಾ ಉದ್ಯೋಗ ಸೃಷ್ಟಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ 3ನೇ ಸ್ಥಾನದಲ್ಲಿದೆ. ರೈತರಿಗೆ ಕೃಷಿ ಉಪಕರಣಗಳ ಬಾಡಿಗೆಗೆ ಶೇ.50ರಷ್ಟು ಸಬ್ಸಿಡಿ ನೀಡುವ 'ರೈತ ಮಿತ್ರ', ಗ್ರಾಮಾನುಭವ, ಭಾರತ್ ಜೋಡೊ ಯುವ ಸಂಘ ಯೋಜನೆ, ಆಸ್ತಿ ನರ‍್ವಹಣೆಗೆ ಇ-ಖಾತಾ ಬ್ಯಾಂಕ್, ನಶಾಮುಕ್ತ ರ‍್ನಾಟಕ ಮತ್ತು ಮರಗಳ ಸಿರಿ ಯೋಜನೆಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದರು.
ಅದಕ್ಕೂ ಮುನ್ನ ಪಥಸಂಚಲನವನ್ನು ಪರೇಡ್ ಕಮಾಂಡರ್ ಗೋವಿಂದ ಅವರು ಮುನ್ನಡೆಸಿದರು. ಪೊಲೀಸ್ ಪಡೆ, ಹೋಮ್‌ಗರ‍್ಡ್, ಎನ್‌ಸಿಸಿ ಘಟಕ ಘಟಕ ಸೇರಿದಂತೆ ವಿವಿಧ ಶಾಲಾ-ಕಾಲೇಜಿ£ ಪಡೆಗಳು ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದವು. ಇನ್ನು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದ ರ‍್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಂಸ್ಕೃತಿಕ ಕರ‍್ಯಕ್ರಮಗಳು ನೆರೆದಿದ್ದವರ ಕಣ್ಮನ ಸೆಳೆದವು.
ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ.ಪರಮೇಶ್ವರ್ ನಾಯ್ಕ, ಶಾಸಕ ಎಚ್.ಆರ್.ಗವಿಯಪ್ಪ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ಶಿವಮರ‍್ತಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಓ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಎಸ್ಪಿ ಎಸ್. ಜಾಹ್ನವಿ, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ವಿವೇಕಾನಂದ, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net