ರಾಜೀನಾಮೆ ಕೊಟ್ಟು ಜನತಾ ನ್ಯಾಯಾಲಯಕ್ಕೆ ಹೋಗೋಣ

ಶಾಸಕ ಭೈರತಿ ಬಸವರಾಜ್
ಶಾಸಕ ಭೈರತಿ ಬಸವರಾಜ್
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಭೈರತಿ ಬಸವರಾಜ್ ಕಾಂಗ್ರೆಸ್ ಗೆ ನೇರ ಸವಾಲು
ಹೊಸಪೇಟೆ: ರಾಜ್ಯದಲ್ಲಿ ಬರ ಪರಿಸ್ಥಿತಿ ಸೇರಿದಂತೆ ಜ್ವಲಂತ ಸಮಸ್ಯೆಗಳನ್ನು ಖಂಡಿಸಿ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಬಡವರಿಗೆ ತಲುಪಬೇಕೆಂದು ಆಗ್ರಹಿಸಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಶಾಸಕ ಭೈರತಿ ಬಸವರಾಜ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣ ಬಳ್ಳಾರಿ, ರಾಯಚೂರು ಸೇರಿದಂತೆ ನಾನಾ ಕಡೆ ದುರ್ಬಳಕೆಯಾಗಿದೆ. ಈ ಪ್ರಕರಣದಲ್ಲಿ ಕೇವಲ ನಾಗೇಂದ್ರ ಅವರ ರಾಜೀನಾಮೆ ಪರಿಹಾರವಲ್ಲ. ಲೂಟಿಯಾದ ಹಣ ಎಸ್‌ಟಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಒತ್ತಾಯಿಸಿದರು.
ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ನಾಗೇಂದ್ರ ಹಾಕಿರುವ ಜನತಾ ನ್ಯಾಯಾಲಯ ಸವಾಲಿಗೆ ತಿರುಗೇಟು ನೀಡಿದ ಅವರು, ಬರೀ ಬಾಯಿ ಮಾತಿನಲ್ಲಿ ಹೇಳುವುದು ಬಿಟ್ಟು, ಎಲ್ಲರೂ ರಾಜೀನಾಮೆ ನೀಡಿ ನೇರವಾಗಿ ಜನತಾ ನ್ಯಾಯಾಲಯಕ್ಕೆ ಹೋಗೋಣ ಎಂದು ಸವಾಲೆಸೆದರು.3
ಇದೇ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಒಡಕಿಲ್ಲ ಎಂದು ಸ್ಪಷ್ಟಪಡಿಸಿದ ಭೈರತಿ ಬಸವರಾಜ್, ಇಂದಿನ ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲ ಪ್ರಮುಖ ನಾಯಕರು ಒಗ್ಗಟ್ಟಾಗಿ ಭಾಗವಹಿಸಲಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net