ಬೆಲೆ ಇಳಿಕೆಗೆ ಕ್ರಮವಹಿಸಲಿ

ರಸಗೊಬ್ಬರ ಬೆಲೆ ಇಳಿಕೆಗೆ ಆಗ್ರಹಿಸಿ ಹರಪನಹಳ್ಳಿಯಲ್ಲಿ ತಹಸೀಲ್ದಾರ್ ಬಿ.ವಿ.ಗಿರೀಶ್‌ಬಾಬುಗೆ ರೈತಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ಮಹಿಳಾ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ರಸಗೊಬ್ಬರ ಬೆಲೆ ಇಳಿಕೆಗೆ ಆಗ್ರಹಿಸಿ ಹರಪನಹಳ್ಳಿಯಲ್ಲಿ ತಹಸೀಲ್ದಾರ್ ಬಿ.ವಿ.ಗಿರೀಶ್‌ಬಾಬುಗೆ ರೈತಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ಮಹಿಳಾ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
Published on
ಹರಪನಹಳ್ಳಿ: ರಸಗೊಬ್ಬರ ಬೆಲೆ ಇಳಿಸುವಂತೆ ಆಗ್ರಹಿಸಿ ರೈತಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ಮಹಿಳಾ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ ತಾಲೂಕು ಆಡಳಿತ ಸೌಧದಲ್ಲಿ ತಹಸೀಲ್ದಾರ್ ಬಿ.ವಿ.ಗಿರೀಶ್‌ಬಾಬುಗೆ ಮನವಿ ಸಲ್ಲಿಸಿದರು.
ಯೂರಿಯಾ ಮತ್ತು ಇತರ ರಸಗೊಬ್ಬರದ ಬೆಲೆ ಹೆಚ್ಚಿದ್ದು, ಕೂಡಲೇ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಆಗತ್ಯ ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹಿಸಬೇಕು. ಈ ಮೂಲಕ ರೈತರಿಗೆ ಅನುಕೂಲ ಕಲ್ಪಿಸಬೇಕು. ನಿಗದಿತ ಬೆಲೆಗಿಂದ ಹೆಚ್ಚುವರಿ ಹಣ ಪಡೆಯುವ ಸೊಸೈಟಿಗಳ ವಿರುದ್ದ ಕಠಿಣ ಕ್ರಮ ವಹಿಸಬೇಕು. ಅಕ್ರಮ ಸಕ್ರಮ ಯೋಜನೆಯಡಿ ಫಾರ್ಮ್ 57ಕ್ಕೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net