ಅಭಿವೃದ್ಧಿಯಲ್ಲಿ ಮಾದರಿ ಜಿಲ್ಲೆಯಾಗಿಸಿ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮನ್ವಯ ಸಮಿತಿ ಸಭೆ ನಡೆಸಿದರು. ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಕನ್ನಡ ವಿವಿ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಎಚ್.ಡಿ.ಪ್ರಶಾಂತ್ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮನ್ವಯ ಸಮಿತಿ ಸಭೆ ನಡೆಸಿದರು. ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಕನ್ನಡ ವಿವಿ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಎಚ್.ಡಿ.ಪ್ರಶಾಂತ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕರೆ
ಹೊಸಪೇಟೆ: ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಭವಿಷ್ಯದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸುತ್ತಿರುವ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಮತ್ತು ದೂರದೃಷ್ಟಿ ಯೋಜನೆ-2031ರ ಸಿದ್ಧತೆಯಲ್ಲಿ ಅಧಿಕಾರಿಗಳು ನಿಖರ ದತ್ತಾಂಶಗಳನ್ನು ಒದಗಿಸುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಈ ವರದಿಯು ಕೇವಲ ರಸ್ತೆ, ಕಟ್ಟಡಗಳಂತಹ ಭೌತಿಕ ಅಭಿವೃದ್ಧಿಗೆ ಸೀಮಿತವಾಗಬಾರದು. ಬದಲಾಗಿ, ಜಿಲ್ಲೆಯ ಜನರ ನೈಜ ಜೀವನಮಟ್ಟ, ಆರೋಗ್ಯ, ಸಾಕ್ಷರತೆ, ಪೌಷ್ಟಿಕತೆಯ ಮಟ್ಟ ಮತ್ತು ಶಿಕ್ಷಣದ ಸ್ಥಿತಿಗತಿಯನ್ನು ಬಿಂಬಿಸುವAತಿರಬೇಕು. ಹಿಂದುಳಿದ ತಾಲೂಕು ಹಾಗೂ ಗ್ರಾಮಗಳನ್ನು ಗುರುತಿಸಿ, ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು. ಮುಂದಿನ ಪೀಳಿಗೆಗಾಗಿ ಪರಿಸರ ರಕ್ಷಣೆ, ಹನಿ ನೀರಾವರಿ ಉತ್ತೇಜನ ಮತ್ತು ಅಂತರ್ಜಲ ವೃದ್ಧಿಗೆ ಒತ್ತು ನೀಡುವುದು. ಕೃಷಿಯಲ್ಲಿ ಆಧುನಿಕ ಪದ್ಧತಿ ಅಳವಡಿಕೆ, ರೈತರ ಆದಾಯ ದ್ವಿಗುಣಗೊಳಿಸುವುದು ಮತ್ತು ಯುವಕರಿಗೆ ಕೌಶಲ್ಯಾಭಿವೃದ್ಧಿ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿ ವಲಸೆ ತಡೆಯುವುದು. ನಗರ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮೂಲಕ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ವನ್ನಾಗಿಸುವುದು. ಅಧಿಕಾರಿಗಳು ನೀಡುವ ವರದಿಗಳು ಕೇವಲ ಕಾಗದದ ಮೇಲೆ ಉಳಿಯಬಾರದು, ಬದಲಾಗಿ ಜಿಲ್ಲೆಯನ್ನು ಎಲ್ಲಾ ಹಂತಗಳಲ್ಲಿ ಮಾದರಿಯಾಗಿಸಲು ದಿಕ್ಸೂಚಿಯಾಗಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net