ಉಜ್ಜಯಿನಿಯಲ್ಲಿ ಸದ್ಧರ್ಮ ಪೀಠದಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ 20 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದವು.
Published on:
Copied
Follow Us
ಉಜ್ಜಯಿನಿ: ನೂತನ ದಂಪತಿ ಸಾಮರಸ್ಯದಿಂದ ಜೀವನ ನಡೆಸಿ ಬದುಕಿನ ಸಾರ್ಥಕ್ಯ ಕಂಡುಕೊಳ್ಳಬೇಕೆಂದು ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಜಗದ್ಗುರು ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಶಿಖರ ತೈಲಾಭಿಷೇಕ ಪ್ರಯುಕ್ತ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಪರಿಸ್ಧಿತಿ ಸುಧಾರಿಸಿಕೊಳ್ಳುವಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹಕಾರಿಯಾಗಿವೆ. ಅದ್ದರಿಂದ ಇಂತಹ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
20 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದವು. ವಿವಿಧ ಮಠಾಧೀಶರು, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ತಿಪ್ಪೇಸ್ವಾಮಿ, ಕಾಂಗ್ರೆಸ್ ಮುಖಂಡ ಟಿ.ಜಿ.ಮಲ್ಲಿಕಾರ್ಜುನ್ ಗೌಡ, ಶಾಸಕರ ಅಪ್ತ ಸಹಾಯಕ ಮರಳುಸಿದ್ದಪ್ಪ, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.