ಬಾಬುಜಿ ಜೀವನ ಚರಿತ್ರೆ ಯುವ ಪೀಳಿಗೆಗೆ ತಲುಪಲಿ

ಹೊಸಪೇಟೆಯಲ್ಲಿ ಶನಿವಾರ ನಡೆದ ಬಾಬು ಜಗಜೀವನ ರಾಮ್ ಜನ್ಮ ದಿನ ಆಚರಿಸಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್ಪಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೈ.ಎ.ಕಾಳೆ, ತಹಸೀಲ್ದಾರ್ ಶೃತಿ ಎಂ,.ಮಳ್ಳಪ್ಪಗೌಡ್ರ್, ತಾ.ಪಂ. ಇಒ ಆಲಂ ಭಾಷಾ, ನಗರಸಭೆ ಪೌರಾಯುಕ್ತ ಶಿವಕುಮಾರ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕರೆ
ಹೊಸಪೇಟೆ: ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿ, ಹಸಿರು ಕ್ರಾಂತಿಗೆ ಕಾರಣರಾದರು. ಅಂತಹ ಮಹಾನ್ ನಾಯಕರ ಆದರ್ಶಗಳನ್ನು ಪಾಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದಲ್ಲಿ ಶನಿವಾರ ನಡೆದ ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಮಾತನಾಡಿದರು.
ಬಾಬು ಜಗಜೀವನ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರ. ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೃಷಿ, ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದರು. ಅವರ ಸೇವೆ ಸ್ಮರಣೀಯವಾದದು. ಅವರ ಜೀವನ ಚರಿತ್ರೆ ಯುವ ಪೀಳಿಗೆಗೆ ತಲುಪಿಸುವ ಕಾರ್ಯ ನಡೆಯಬೇಕು ಎಂದರು.
ಎಸ್ಪಿ ಎಸ್.ಜಾಹ್ನವಿ ಮಾತನಾಡಿ, ದೇಶಾದ್ಯಂತ ಬಾಬುಜಿ ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಅವರು ಸ್ವಾತಂತ್ರ‍್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಅವರು ಸ್ವಾತಂತ್ರ‍್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net