50 ವರ್ಷಗಳ ಪಯಣದ ನೆನಪು

ಹರಪನಹಳ್ಳಿಯಲ್ಲಿ ಬಿಜೆಪಿ ಪ್ರಮುಖರು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವದ ಭಿತ್ತಿಪತ್ರ ಪ್ರದರ್ಶಿಸಿದರು.
ಹರಪನಹಳ್ಳಿಯಲ್ಲಿ ಬಿಜೆಪಿ ಪ್ರಮುಖರು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವದ ಭಿತ್ತಿಪತ್ರ ಪ್ರದರ್ಶಿಸಿದರು.
Published on
ಹರಪನಹಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅವಿರತ ಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಆಯೋಜಿಸಿದ್ದ ಬಿ.ಎಸ್.ಯಡಿಯೂರಪ್ಪ ಅಭಿನೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾನುವಾರ ಮಾತನಾಡಿದರು. 50 ವರ್ಷಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಅವರು ಸಾಕಷ್ಟು ಏಳು- ಬೀಳುಗಳನ್ನು ಕಂಡು, ಪಕ್ಷವನ್ನು ಸುಭದ್ರವಾಗಿ ನೆಲೆಯೂರಿ ನಿಲ್ಲುವಂತೆ ಮಾಡಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಯಡಿಯೂರಪ್ಪ ಅವರ ಸುದೀರ್ಘ ರಾಜಕೀಯ ಪಯಣವನ್ನು ನೆನಪಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದರು.
ಪ್ರಮುಖರಾದ ಶಿಂಗ್ರಿಹಳ್ಳಿ ಮರಿಯಜ್ಜ, ಶೃಂಗಾರತೋಟ ಗಿರೀಶ, ತೆಲಿಗಿ ಗಂಗಾಧರ, ಕಂಚೀಕೆರೆ ಚಂದ್ರಶೇಖರ, ನಾಗರಕೊಂಡ ರೇವಣಸಿದ್ದ, ಕಡತಿ ರಮೇಶ, ನಂದಿಬೇವೂರು ಚಾರೆಪ್ಪ, ಯಡಿಹಳ್ಳಿ ಅಂಜಿನಪ್ಪ, ತೆಲಿಗಿ ಬಸವರಾಜ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net