ಹೊಸಪೇಟೆ: ಶಾಲಾ ಶಿಕ್ಷಣ ಇಲಾಖೆಯಿಂದ ತಾಲೂಕಿನ ಮಲಪನಗುಡಿ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ನನ್ನ ದಿನ ನನ್ನ ಹಕ್ಕು-ವಿಶ್ವ ಮಕ್ಕಳ ಹಕ್ಕುಗಳ ದಿನಾಚರಣೆ ನಿಮಿತ್ತ ಮಕ್ಕಳ ಮಾನಸಿಕ ಆರೋಗ್ಯದ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ತಾಪಂ ಇಒ ಎಂ.ಡಿ.ಆಲಂ ಬಾಷಾ ಮಾತನಾಡಿ, ಜೀವನದಲ್ಲಿಸಮಸ್ಯೆ-ಸವಾಲುಗಳನ್ನು ಸಮಚಿತ್ತದಿಂದ ಎದುರಿಸುವಲ್ಲಿ ಮಾನಸಿಕ ಆರೋಗ್ಯದ ಪಾತ್ರ ಬಹಳ ಮಹತ್ವದ್ದಾಗಿದೆ. ಇತ್ತಿಚಿನ ದಿನಗಳಲ್ಲಿಅನೇಕ ವಿದ್ಯಾರ್ಥಿಗಳು ಮಾನಸಿಕ ಒತ್ತಡ, ಖಿನ್ನತೆ ಹಾಗೂ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ವಿಪರೀತ ಸಂದರ್ಭಗಳಲ್ಲಿ ಆತ್ಮಹತ್ಯೆಗೂ ಶರಣಾಗುತ್ತಿದ್ದಾರೆ. ಆನಂದದ ಬದುಕು ಸಾಗಿಸಲು ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದರು.
ಪಿಡಿಒ ಹನುಮಂತಪ್ಪ, ಶಾಲಾ ಮುಖ್ಯಶಿಕ್ಷಕ ಟಿ.ವಿಶ್ವನಾಥ್, ಪ್ರಮುಖರಾದ ಭವ್ಯ, ಸುರೇಶ, ಮುತ್ತಣ್ಣ, ಸ್ವಾಮಿ ಇತರರಿದ್ದರು.