ಆಸ್ಪತ್ರೆ ನೌಕರನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಜೆಯ ಮದಕರಿ
ಅಜೆಯ ಮದಕರಿ
Published on
ಹೊಸಪೇಟೆ: ಇಲ್ಲಿನ ಉಪವಿಭಾಗಿಯಾ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಪ್ರಾಪ್ತೆ ಮೇಲೆ ಆಸ್ಪತ್ರೆಯ ಗ್ರೂಪ್ ಡಿ ನೌಕರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಅಜೆಯ ಮದಕರಿ ಬಂಧಿತ ಸರ್ಕಾರಿ ಆಸ್ಪತ್ರೆ ಗ್ರೂಪ್ ಡಿ ನೌಕರ. 16 ವರ್ಷದ ಅಪ್ರಾಪ್ತೆ ತನ್ನ ತಾಯಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಬಂದ ವೇಳೆ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಆರೋಪಿ ಅಜಯ ಅಪ್ರಾಪ್ತೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ತಂಪು ಪಾನಿಯದಲ್ಲಿ ನಶೆ ಬರುವ ಮಾತ್ರೆ ಹಾಕಿ ಅತ್ಯಾಚಾರ ನಡೆಸಿದ್ದಾನೆಂದು ಆರೋಪಿಸಲಾಗಿದೆ. ಬುಧವಾರ ಪ್ರಕರಣ ದಾಖಲಿಸಿಕೊಂಡ ಬಡಾವಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
======
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net