ಸಂಸದ ಈ.ತುಕಾರಾಂ ರಾಜೀನಾಮೆ ನೀಡಲಿ

ಹೊಸಪೇಟೆ ಪುನೀತ್ ರಾಜಕುಮಾರ್ ವೃತ್ತದಲ್ಲಿ ಶುಕ್ರವಾರ ಸಂಸದ ಈ.ತುಕಾರಾಂ ವಿರುದ್ಧ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಉಪಾಧ್ಯಕ್ಷ ಸಂದೀಪ್ ಸಿಂಗ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಇತರರಿದ್ದರು.
ಹೊಸಪೇಟೆ ಪುನೀತ್ ರಾಜಕುಮಾರ್ ವೃತ್ತದಲ್ಲಿ ಶುಕ್ರವಾರ ಸಂಸದ ಈ.ತುಕಾರಾಂ ವಿರುದ್ಧ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಉಪಾಧ್ಯಕ್ಷ ಸಂದೀಪ್ ಸಿಂಗ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಆಗ್ರಹ
ಹೊಸಪೇಟೆ: ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ ಯುವಕನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆಗಳ ಸಂಸದ ಈ.ತುಕಾರಾಂ ವಿರುದ್ಧ ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು, ನಗರದ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಜಮಾಯಿಸಿ ಸಂಸದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತುಕಾರಾಂ ಅವರ ಭಾವಚಿತ್ರವನ್ನು ಕಾಲಿನಿಂದ ತುಳಿದು ಆಕ್ರೋಶ ಹೊರಹಾಕಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕಾಮಗಾರಿಗಳ ಗುಣಮಟ್ಟ ಪ್ರಶ್ನಿಸುವುದು ತಪ್ಪಲ್ಲ. ಆದರೆ ಪ್ರಶ್ನಿಸಿದ ಯುವಕನ ಮೇಲೆ ದಬ್ಬಾಳಿಕೆ ನಡೆಸಿರುವುದು ಖಂಡನೀಯ. ಎಸ್.ಸಿ, ಎಸ್.ಟಿ ಕೋಟಾವನ್ನು ದುರ್ಬಳಕೆ ಮಾಡಿಕೊಂಡಿರುವ ತುಕಾರಾಂ ಅವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ತಪ್ಪು ಪ್ರಶ್ನಿಸಿದ ಅಮಾಯಕ ಯುವಕನ ಮೇಲೆ ಹಲ್ಲೆ ನಡೆಸಿ, ಆತನ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಇಂತಹ ದೌರ್ಜನ್ಯಗಳು ದೀರ್ಘಕಾಲ ನಡೆಯುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಯುವಮೋರ್ಚ ಜಿಲ್ಲಾ ಕಾರ್ಯದರ್ಶಿ ಕೃಷ್ಣನಾಯ್ಕ್, ಪ್ರಮುಖರಾದ ಸಚಿನ್, ಮಧುರಚನ್ನಶಾಸ್ತ್ರಿ, ಇಮ್ತಿಯಾಜ್ ಗೌಳಿ, ರುದ್ರಪ್ಪ, ರೇಣುಕಾ, ವಿಜಯಲಕ್ಷ್ಮೀ, ಅನುರಾಧ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net