ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಿಂ ಪಿಕ್ ಅಸೋಸಿಯೇಷನ್ ಸಹ ಯೋಗದಲ್ಲಿ ಆಯೋಜಿಸಲಾಗುತ್ತಿರುವ ಮಿನಿ ಒಲಿಂಪಿಕ್ ಕ್ರೀಡಾಕೂಟವು 2026ರ ಜ.16ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿದೆ. ಈ ಕ್ರೀಡಾಕೂಟದ 14 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಕೆ.ವಿನೋದ್ ಅವರು ಟೇಕ್ವಾಂಡೋ ವಿಭಾಗದಲ್ಲಿ ವಿಜಯನಗರ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಹೊಯ್ಸಳ ಕರಾಟೆ ಕ್ಲಬ್‌ನಲ್ಲಿ ತರಬೇತಿ ಪಡೆದಿದ್ದಾನೆ. ಕಠಿಣ ಪರಿ ಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದಿಂದ ಈ ಸಾಧನೆ ಮಾಡಿದ್ದಾರೆ. ದಿನನಿತ್ಯದ ವಿದ್ಯಾಭ್ಯಾಸದ ಜತೆಗೆ ಬೆಳಗಿನ ಜಾವ ದಿನಪತ್ರಿಕೆ ಹಂಚುವ ಕೆಲಸ ಮಾಡುತ್ತಾ ತರಬೇತಿಯನ್ನು ಮುಂದುವರಿಸಿರುವುದು ವಿಶೇಷವಾಗಿದೆ.