ಸಿಲಿಂಡರ್‌ಗೆ ಹೆಚ್ಚುವರಿ ಹಣ ವಸೂಲಿ ಸಲ್ಲ

ಎಲ್‌ಪಿಜಿ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ ಹಾಗೂ ಹೆಚ್ಚುವರಿ ಹಣ ವಸೂಲಿ ತಡೆಯುವಂತೆ ಆಗ್ರಹಿಸಿ ಹಗರಿಬೊಮ್ಮನಹಳ್ಳಿಯಲ್ಲಿ ತಹಸೀಲ್ದಾರ್ ಆರ್.ಕವಿತಾಗೆ ಸಿಪಿಐ(ಎಂ)ದಿಂದ ಮನವಿ ಸಲ್ಲಿಸಲಾಯಿತು.
ಎಲ್‌ಪಿಜಿ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ ಹಾಗೂ ಹೆಚ್ಚುವರಿ ಹಣ ವಸೂಲಿ ತಡೆಯುವಂತೆ ಆಗ್ರಹಿಸಿ ಹಗರಿಬೊಮ್ಮನಹಳ್ಳಿಯಲ್ಲಿ ತಹಸೀಲ್ದಾರ್ ಆರ್.ಕವಿತಾಗೆ ಸಿಪಿಐ(ಎಂ)ದಿಂದ ಮನವಿ ಸಲ್ಲಿಸಲಾಯಿತು.
Published on
ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ ಹಾಗೂ ಹೆಚ್ಚುವರಿ ದರ ವಸೂಲಿ ತಡೆಯುವಂತೆ ಒತ್ತಾಯಿಸಿ ತಹಸೀಲ್ದಾರ್ ಆರ್.ಕವಿತಾಗೆ ಸಿಪಿಐ (ಎಂ) ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.
ಜಿಲ್ಲಾ ಕಾರ್ಯದರ್ಶಿ ಆರ್.ಎಸ್.ಬಸವರಾಜ್ ಮಾತನಾಡಿ, ಇರಾನ್, ಇಸ್ರೇಲ್ ಹಾಗೂ ಅಮೇರಿಕ ಯುದ್ಧದ ನೆಪವೊಡ್ಡಿ ಕೆಲ ಗ್ಯಾಸ್ ವಿತರಕರು ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಜತೆಗೆ ಗ್ಯಾಸ್ ಸಿಲಿಂಡರ್‌ಗೆ ಹೆಚ್ಚುವರಿ ಹಣ ಪಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ತಾಲೂಕು ಕಾರ್ಯದರ್ಶಿ ಬಿ.ಮಾಳಮ್ಮ ಮಾತನಾಡಿ, ಫೋನ್ ಮೂಲಕ ಸಿಲಿಂಡರ್ ಬುಕ್ಕಿಂಗ್ ಆಗುತ್ತಿಲ್ಲ. ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ಎರಡು ಸಾವಿರ ರೂ. ಹಾಗೂ ಅಧಿಕ ಮೊತ್ತಕ್ಕೆ ಸಿಲಿಂಡರ್ ಮಾರಾಟ ಮಾಡಲಾಗುತ್ತಿದೆ . ಗ್ಯಾಸ್ ಏಜೆನ್ಸಿಗಳ ಮಾಲೀಕರು ಹಾಗೂ ಕೆಲ ಅಧಿಕಾರಿಗಳ ಶಾಮೀಲಿನೊಂದಿಗೆ ಈ ದಂಧೆ ನಡೆಯುತ್ತಿದೆ. ತಾಲೂಕು ಆಡಳಿತ ಕೂಡಲೇ ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಆಗುವುದನ್ನು ತಡೆಗಟ್ಟಬೇಕು. ಜನರಿಗೆ ಸುಲಭವಾಗಿ ಸಿಲಿಂಡರ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net