ಮಹಿಳಾ ನೌಕರರ ಸಂಘಟನೆ ಅಗತ್ಯ

ರೋಶಿನಿ ಗೌಡ
ರೋಶಿನಿ ಗೌಡ
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ಹೇಳಿಕೆ
ಹೊಸಪೇಟೆ: ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಮಹಿಳಾ ನೌಕರರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ಸಂಘಟನೆಯನ್ನು ಬಲಪಡಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಶೇ.52 ರಷ್ಟು ಮಹಿಳಾ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳಾ ನೌಕರರು ಎದುರಿಸುತ್ತಿರುವ ಸಮಸ್ಯೆಗಳು, ಸವಲತ್ತುಗಳನ್ನು ಪಡೆಯಲು ಸಂಘಟನೆ ಅವಶ್ಯಕವಾಗಿದೆ. ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಸಂಘದ ಸದಸ್ಯತ್ವ ಪಡೆಯುವ ಮೂಲಕ ಸಂಘಟನೆ ಬಲಗೊಳಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ನೌಕರರಲ್ಲಿ ಜಾಗೃತಿ ಮೂಡಿಸುವ ಜತೆಗೆ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. ಸಮಸ್ಯೆಗಳ ನಿವಾರಣೆಗೆ ಎಲ್ಲಾ ಮಹಿಳಾ ನೌಕರರು ಸಂಘದೊAದಿಗೆ ಹೆಜ್ಜೆಹಾಕುವ ಮೂಲಕ ಸಂಘಟಿತ ಪ್ರ ಪ್ರಯತ್ನಕ್ಕೆ ಬೆಂಬ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಡಾ.ವೀಣಾ ಕೃಷ್ಣಮೂರ್ತಿ, ಎಂ.ಆಶಾರಾಣಿ, ನೀಲಮ್ಮ ಗಚ್ಚಿನಮಠ, ವಿಜಯಕುಮಾರಿ, ಪದ್ಮಾವತಿ, ರೇಖಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net