ನ್ಯಾಯಾಲಯದ ನಿರ್ದೇಶನದಂತೆ ಪಟ್ಟಾ ಕೋಡಿ

ಹೊಸಪೇಟೆಯಲ್ಲಿ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಎನ್. ಯಲ್ಲಾಲಿಂಗ, ಚಂದ್ರು, ಕರಿಯಣ್ಣ, ನಬೀಸಾಬ್, ಕಣಿಮಪ್ಪ, ಎ.ಸ್ವಾಮಿ, ದುರುಗಪ್ಪ, ಗಣೇಶ್ ಸೇರಿದಂತೆ ಇತರರಿದ್ದರು.
ಹೊಸಪೇಟೆಯಲ್ಲಿ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಎನ್. ಯಲ್ಲಾಲಿಂಗ, ಚಂದ್ರು, ಕರಿಯಣ್ಣ, ನಬೀಸಾಬ್, ಕಣಿಮಪ್ಪ, ಎ.ಸ್ವಾಮಿ, ದುರುಗಪ್ಪ, ಗಣೇಶ್ ಸೇರಿದಂತೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ಪ್ರಾಂತ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮನವಿ
ಹೊಸಪೇಟೆ : ಬಗರ್ ಹುಕುಂ ಹಾಗೂ ಇನಾಂ ಭೂಮಿಯ ಸಾಗುವಳಿದಾರರಿಗೆ ತಕ್ಷಣವೇ ಪಟ್ಟಾ ನೀಡಬೇಕು ಮತ್ತು ಮುಂಗಾರು ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ, ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಸಂಚಾಲಕ ಆನಂದ್ ಮಾತನಾಡಿ, ಜಿಲ್ಲೆಯ ಬಡ ದಲಿತ ಮತ್ತು ಹಿಂದುಳಿದ ವರ್ಗಗಳ ರೈತರು ಭೂಮಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು. ಫಾರಂ 50, 53, 57 ರಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿನಾಕಾರಣ ತಿರಸ್ಕರಿಸಲಾಗುತ್ತಿದೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಅರಣ್ಯೀಕರಣದ ಹೆಸರಿನಲ್ಲಿ ಒಕ್ಕಲೆಬ್ಬಿಸಬಾರದು. ನ್ಯಾಯಾಲಯದ ನಿರ್ದೇಶನದಂತೆ ಅರ್ಹ ರೈತರಿಗೆ ಕೂಡಲೇ ಪಟ್ಟಾ ನೀಡಬೇಕು. ಯೂರಿಯಾ ಗೊಬ್ಬರ ಪಡೆಯಲು ಎಫ್.ಐ.ಡಿ ಕಡ್ಡಾಯಗೊಳಿಸಿರುವುದು ಅವೈಜ್ಞಾನಿಕ. ಇದರಿಂದ ಸಣ್ಣ ರೈತರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಈ ಕೂಡಲೇ ಈ ನಿಯಮವನ್ನು ಸಡಿಲಗೊಳಿಸಿ ಬೆಳೆಯ ಅಗತ್ಯಕ್ಕೆ ತಕ್ಕಂತೆ ಗೊಬ್ಬರ ಪೂರೈಸಬೇಕು ಎಂದು ಒತ್ತಾಯಿಸಿದರು.
ಮುಂದಿನ ತಿಂಗಳಿನಿಂದ ಮುಂಗಾರು ಆರಂಭವಾಗಲಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ರೈತ ಸಂಘಟನೆಗಳೊಂದಿಗೆ ಜಂಟಿ ಸಭೆ ನಡೆಸಿ ಮಾಹಿತಿ ನೀಡಬೇಕು. ರೈತರಿಗೆ ಭೂಮಿಯ ಹಕ್ಕು ಸಿಗದ ಕಾರಣ ಬದುಕಲು ದಾರಿಯಿಲ್ಲದೆ ಜನರು ಹಳ್ಳಿ ಬಿಟ್ಟು ನಗರಗಳತ್ತ ವಲಸೆ ಹೋಗುತ್ತಿದ್ದಾರೆ. ಸರಕಾರ ರೈತರ ನೆರವಿಗೆ ಧಾವಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net