ಸಿಡಿಲು, ಗಾಳಿ ಜನರು ಜಾಗೃತರಾಗಿ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಜಿ.ಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಭಾಗಿಯಾಧಿಕಾರಿ ವಿವೇಕಾನಂದ ಇತರರಿದ್ದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಜಿ.ಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಭಾಗಿಯಾಧಿಕಾರಿ ವಿವೇಕಾನಂದ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಕರೆ

ಹೊಸಪೇಟೆ:ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು, ಸಿಡಿಲು ಮತ್ತು ಗಾಳಿ ಮಳೆಯಿಂದಾಗಿ ಸಾಕಷ್ಟು ಸಾವು ನೋವು ಸಂಭವಿಸಲಿದ್ದು, ಪ್ರತಿಯೊಬ್ಬರೂ ಇವುಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೂರ್ವ ಮುಂಗಾರು ವೇಳೆ ಗುಡುಗು ಸಿಡಲು ಶಬ್ದ ಕೇಳಿಸಿದ ತಕ್ಷಣ ತೆರೆದ ಮೈದಾನ, ಗದ್ದೆ ಅಥವಾ ಗುಡ್ಡಗಾಡು ಪ್ರದೇಶದಲ್ಲಿದ್ದರೆ ಕೂಡಲೇ ಸುರಕ್ಷಿತ ಕಟ್ಟಡದ ಒಳಗೆ ಆಶ್ರಯ ಪಡೆಯಬೇಕು. ಒಂಟಿ ಮರ ಅಥವಾ ಎತ್ತರದ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ವಿದ್ಯುತ್ ಉಪಕರಣಗಳಾದ ಮೊಬೈಲ್, ಟಿವಿ, ಫ್ರಿಡ್ಜ್ ಮುಂತಾದ ವಿದ್ಯುತ್ ಉಪಕರಣಗಳ ಬಳಕೆ ಮಾಡಬಾರದು. ಕೇಂದ್ರ ಸರ್ಕಾರ ಸಿದ್ದಪಡಿಸಿರುವ ದಾಮಿನಿ ಆಪ್ ಬಳಸುವುದು ಸೂಕ್ತ. ಇದು ಸಿಡಿಲಿನ ಮುನ್ಸೂಚನೆ ನೀಡುತ್ತದೆ ಎಂದು ತಿಳಿಸಿದರು.

ಜಾನುವಾರುಗಳನ್ನು ಸುರಕ್ಷಿತವಾದ ಶೆಡ್ ಅಥವಾ ಕೊಟ್ಟಿಗೆಯಲ್ಲಿ ಕಟ್ಟಬೇಕು. ರೀತಿಯ ಯಾವುದೇ ಆಕಸ್ಮಿಕ ಘಟನೆಗಳು ಸಂಭವಿಸಿದಲ್ಲಿ ತಕ್ಷಣ ಹತ್ತಿರದ ತಹಶೀಲ್ದಾರ್ ಕಚೇರಿ ಅಥವಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1077 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.

ಜಿ.ಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ .ಬಾಲಕೃಷ್ಣಪ್ಪ, ಉಪವಭಾಗಿಯಾಧಿಕಾರಿ ವಿವೇಕಾನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net