ಕ್ರಸ್ಟ್ ಗೇಟ್ ಲೋಕಾರ್ಪಣೆಯಲ್ಲೂ ಅಜ್ಜಯ್ಯ ಸ್ವಾಮಿ ಪೋಟೋ

ತುಂಗಭದ್ರಾ ಜಲಾಶಯ ಕ್ರಸ್ಟ್‌ ಗೃಟ್ ಲೋಕಾರ್ಪಣೆ ಸ್ಥಳದಲ್ಲಿ ಅಜ್ಜಯ್ಯ ಸ್ವಾಮಿ
ತುಂಗಭದ್ರಾ ಜಲಾಶಯ ಕ್ರಸ್ಟ್‌ ಗೃಟ್ ಲೋಕಾರ್ಪಣೆ ಸ್ಥಳದಲ್ಲಿ ಅಜ್ಜಯ್ಯ ಸ್ವಾಮಿ
Published on
ಹೊಸಪೇಟೆ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾರ್ಯಕ್ರಮದ ಸ್ಥಳದಲ್ಲಿ ವಿಶೇಷ ಧಾರ್ಮಿಕ ಮತ್ತು ರಾಜಕೀಯ ಮುನ್ನೆಲೆ ಸೃಷ್ಟಿಯಾಗಿದೆ. ಜಲಾಶಯದ ಗೇಟ್ ಲೋಕಾರ್ಪಣೆ ಮಾಡುವ ಮುನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯ ಸ್ವಾಮಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರಾಧ್ಯ ದೈವವಾಗಿರುವ ಗಂಗಾಧರ ಅಜ್ಜಯ್ಯ ಸ್ವಾಮಿ ಅವರಿಗೆ ಈ ಮೂಲಕ ಜಲಾಶಯದ ಆವರಣದಲ್ಲಿ ವಿಶೇಷ ಗೌರವ ಸಮರ್ಪಿಸಲಾಗುತ್ತಿದೆ. ಕೇವಲ ಡ್ಯಾಂ ಆವರಣ ಮಾತ್ರವಲ್ಲದೆ, ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಮಾವೇಶದ ಮುಖ್ಯ ವೇದಿಕೆಯಲ್ಲೂ ಗಂಗಾಧರ ಸ್ವಾಮಿ ಅವರ ದೊಡ್ಡ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗಿದೆ.
ಟಿಬಿ ಡ್ಯಾಂ ಕ್ರಸ್ಟ್ ಗೇಟ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಪ್ರಮುಖರು ಭಾಗವಹಿಸುತ್ತಿದ್ದಾರೆ. ಡಿಕೆಶಿ ಅವರ ನಡೆ ಇದೀಗ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಜಲಾಶಯದ ಗೇಟ್ ಉದ್ಘಾಟನೆಗೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆಯಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net