ಯುವಜನರ ಮೇಲೆ ಪೊಲೀಸ್ ದಾಳಿ ಖಂಡನೀಯ

ದೆಹಲಿಯಲ್ಲಿ ಹೋರಾಟನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದಾಳಿ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಯಿತು.
ದೆಹಲಿಯಲ್ಲಿ ಹೋರಾಟನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದಾಳಿ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಯಿತು.
Published on
ಹರಪನಹಳ್ಳಿ: ದೆಹಲಿಯಲ್ಲಿ ಹೋರಾಟನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಖಂಡನೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇಜಾರಿ ಶಿರಸಪ್ಪ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ನೀಟ್ ಪರೀಕ್ಷೆ ಅವ್ಯವಸ್ಥೆಗೆ ಬಲಿಯಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸೋಮವಾರ ದೇಶದ ವಿವಿಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ದೆಹಲಿಯಲ್ಲಿ ಸಂಸತ್ ಚಲೋ ಹಮ್ಮಿಕೊಂಡಿದ್ದವು. ಈ ವೇಳೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ದೆಹಲಿ ಪೊಲೀಸರು ನಡೆಸಿದ ದಾಳಿ ಅತ್ಯಂತ ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net