ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ

ಹೊಸಪೇಟೆ ಮಹಿಳಾ ಸಮಾಜ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಉದ್ಘಾಟಿಸಿದರು.
ಹೊಸಪೇಟೆ ಮಹಿಳಾ ಸಮಾಜ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮಕ್ಕಳ ದಿನಾಚರಣೆಯಲ್ಲಿ ನ್ಯಾಯಾಧೀಶ ಎನ್.ಸುಬ್ರಮಣ್ಯ ಕರೆ

ಹೊಸಪೇಟೆ: ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪ್ರತಿಯೊಬ್ಬರು ಕಾಳಜಿ ವಹಿಸಿ ಕಡ್ಡಾಯವಾಗಿ ಗುಣಮ್ಟದ ಶಿಕ್ಷಣವನ್ನು ಒದಗಿಸಬೇಕು ಎದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ನಗರದ ಮಹಿಳಾ ಸಮಾಜ ಶಾಲೆಯ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಕ್ಕಳಲ್ಲಿ ಜಾತಿ, ಲಿಂಗ, ಧರ್ಮ ಮತ್ತು ಇತರೆ ಕಾರಣಗಳಿಂದ ವಿದ್ಯಾಬ್ಯಾಸ ಮಾಡುವುದಕ್ಕೆ ಅವಕಾಶ ನಿರಕರಿಸುವಂತಿಲ್ಲ.

ಕೇರಳ ಪ್ರದೇಶವು ಸಾಕ್ಷರತೆ ರಾಜ್ಯ ಮತ್ತು ನಿರುದ್ಯೋಗ ಎನ್ನವುದು ಸಂಪೂರ್ಣ ಕಡಿಮೆವಾಗಿದೆ. ಶಾಲಾ ಆವರಣದಿಂದ 200 ಮೀಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು, ಮದ್ಯ ಮಾರಾಟ ಮತ್ತು ಮಾದಕ ವಸ್ತುಗಳನ್ನು ನಿಷೇದಿಸಿಲಾಗಿದೆ. ಆದರೂ ಈ ಶಾಲೆಯ ಸುತ್ತಮುತ್ತ ವಾತಾರಣದಲ್ಲಿ ತಂಬಾಕು ಮತ್ತು ಮಾದಕ ವಸ್ತುಗಳ ಮಾರಾಟಗಳನ್ನು ಮಾಡಲಾಗುತ್ತದೆ. ಚಿತ್ತವಾಡ್ಗಿ ಪೊಲೀಸ್‌ರು ಅದರ ಬಗ್ಗೆ ಸೂಕ್ತ ಕ್ರಮ ವಹಿಸಿಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net