

ಪ್ರಮುಖ ಮುಖ್ಯಾಂಶಗಳು
ಹೊಸಪೇಟೆ: ನಗತದ ಪುಣ್ಯಮೂರ್ತಿ ವೃತ್ತದಲ್ಲಿ ಟ್ರಾಫಿಕ್ ಪೊಲೀಸರ ವರ್ತನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ,ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದೆ.
ಪೊಲೀಸರು ದಂಡದ ಹೆಸರಿನಲ್ಲಿ ಸಾರ್ವಜನಿಕರಿಗೆ ನಿರಂತರ ಕಿರಿಕಿರಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ರಸ್ತೆಗಿಳಿದರು.ವಿಶೇಷವಾಗಿ, ಮಗುವನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬೈಕ್ ಸವಾರನನ್ನೂ ತಡೆದು ಪೊಲೀಸರು ದಂಡ ವಿಧಿಸಿದ್ದು ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಯಿಂದಾಗಿ ಪುಣ್ಯಮೂರ್ತಿ ವೃತ್ತದ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಯಿತು. ವಾಹನ ಸವಾರರು ಪರದಾಡುವಂತಾಯಿತು. ಸ್ಥಳಕ್ಕೆ ನಗರ ಸಂಚಾರ ಪೊಲೀಸ್ ಠಾಣೆ ಹಾಗೂ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ದೌಡಾಯಿಸಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.