ಪಲ್ಸ್ ಪೋಲಿಯೋ ಶೇ.100 ಗುರಿ

ಹೊಸಪೇಟೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ಶಂಕರ್ ನಾಯ್ಕ ಚಾಲನೆ ನೀಡಿ ಮಾತನಾಡಿದರು
ಹೊಸಪೇಟೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಡಿಎಚ್‌ಒ ಡಾ.ಶಂಕರ್ ನಾಯ್ಕ ಚಾಲನೆ ನೀಡಿ ಮಾತನಾಡಿದರು
Published on

ಪ್ರಮುಖ ಮುಖ್ಯಾಂಶಗಳು

  • ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಡಿಎಚ್‌ಒ ಡಾ.ಶಂಕರ್ ನಾಯ್ಕ ಸೂಚನೆ
ಹೊಸಪೇಟೆ: ಐದು ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಪೋಲಿಯೋ ಲಸಿಕೆ ಬೂತ್‌ಗಳಿಗೆ ತೆರಳಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಡಿಎಚ್ಒ ಡಾ.ಎಲ್.ಆರ್.ಶಂಕರ್ ನಾಯ್ಕ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್, ಭಾರತೀಯ ವೈದ್ಯಕೀಯ ಸಂಘ, ವಿಶೇಷ ಚೇತನರ ಸಂಘಟನೆಗಳ ವೇದಿಕೆ ಸಹಯೋಗದಲ್ಲಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗದರ್ಶನದಲ್ಲಿ ಸಂಪೂರ್ಣ ಭಾರತ ಪೋಲಿಯೋ ಮುಕ್ತವಾಗುವಲ್ಲಿ ಯಶಸ್ವಿಯಾಗಿದೆ. ಆದರೆ ನೆರೆಯ ದೇಶಗಳಲ್ಲಿ ಪ್ರಕರಣ ಕಂಡು ಬಂದಿರುವ ಹಿನ್ನೆಲೆ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೇ ಪೋಲಿಯೋ ಲಸಿಕೆ ಹಾಕಿಸುವಲ್ಲಿ ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ಡಿ.21 ರಿಂದ 24ರ ವರಗೆ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಕಡ್ಡಾಯವಾಗಿ ಲಸಿಕೆ ಹಾಕಿಸಲು ಉತ್ತೇಜನ ನೀಡಬೇಕಿದೆ. ಈ ಹಿಂದೆ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ ಈ ಬಾರಿಯೂ ತಪ್ಪದೇ ಇನ್ನೊಂದು ಬಾರಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಿಂದ ಆರಂಭಗೊಂಡ ಜಾಥಾ ಗಾಂಧಿ ಚೌಕ್, ಪುಣ್ಯಮೂರ್ತಿ ವೃತ್ತ, ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ, ಡಾ.ಪುನೀತ್ ರಾಜಕುಮಾರ್ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರಾಮಾ ಟಾಕೀಸ್ ಮುಂಭಾಗದಿಂದ ದೊಡ್ಡ ಮಸೀದಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಪೋಲಿಯೋ ಘೋಷಣೆ ಕೂಗುತ್ತಾ ಜನ ಜಾಗೃತಿ ಮೂಡಿಸಿದರು.
2ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್, ಡಿಎಚ್ಒ ಸಿಂಧು ಅಂಗಡಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಘುನಾಥ ದೀಪಾಲಿ, ಮಕ್ಕಳ ತಜ್ಞೆ ಲಲಿತಾ ಜೈನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net