ಹೊಸಪೇಟೆಯಲ್ಲಿ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಬುಧವಾರ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾರ್ಯದರ್ಶಿ ಸಿ.ಆರ್.ಭರತ್, ಪ್ರಮುಖರಾದ ಗಣೇಶ್ ಪಾಟೀಲ್, ಶೇಕ್ ತಾಜುದ್ದೀನ್, ಇಮ್ತಿಯಾಜ್, ಶಿವಕುಮಾರ್, ಅರ್ಬಜ್ ಖಾನ್ ಇತರರಿದ್ದರು.
ಹೊಸಪೇಟೆ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಸಿ.ಆರ್.ಭರತ್ ಮಾತನಾಡಿ, ಪದೇ ಪದೇ ಮರುಕಳುಹಿಸುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ. ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಮೂರು ವರ್ಷಗಳಲ್ಲಿ ಎರಡನೆಯ ಬಾರಿಗೆ, ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾಗಿರುವವರನ್ನು ಶಿಕ್ಷಿಸಬೇಕು ಎಂದು ಒತ್ತಾಯಿಸಿದರು. ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವವರಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ವಿಧಿಸಬೇಕು. ಎನ್‌ಟಿಎ ಸಂಸ್ಥೆಯನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು..