ಆರೋಗ್ಯವಂತ ಮಕ್ಕಳನ್ನಾಗಿಸಲು ಜಾಗೃತಿ ಮೂಡಿಸಿ

ಹೊಸಪೇಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದರು. ಜಿಪಂ ಸಿಇಓ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಡಿ.ಹೆಚ್.ಓ. ಡಾ.ಶಂಕರ ನಾಯ್ಕ ಇದ್ದರು.
ಹೊಸಪೇಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದರು. ಜಿಪಂ ಸಿಇಓ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಡಿ.ಹೆಚ್.ಓ. ಡಾ.ಶಂಕರ ನಾಯ್ಕ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಂತು ಹುಳು ನಿವಾರಣಾ ಸಮನ್ವಯ ಸಮಿತಿ ಸಭೆಯಲ್ಲಿ ಡಿಸಿ ಸೂಚನೆ
ಹೊಸಪೇಟೆ: ಜಂತು ಹುಳು ರಹಿತ , ಆರೋಗ್ಯವಂತ ಮಕ್ಕಳನ್ನಾಗಿಸಲು ಜಿಲ್ಲಾದ್ಯಾಂತ ಫೆ.10 ರಂದು ಜಂತುಹುಳು ನಿವಾರಣಾ ದಿನಾಚರಣೆ ಆಚರಣೆ ಮತ್ತು ಫೆ.16ರಂದು ಮಾಪ್ ಆಪ್ ಕಾರ್ಯಕ್ರಮದ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ನಿಮಿತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಂತು ಹುಳು ನಿವಾರಣಾ ದಿನಾಚರಣೆ ಅಂಗವಾಗಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತವಾಗಿ ಜಂತು ಹುಳು ನಿವಾರಣಾ ಮಾತ್ರೆ ವಿತರಿಸಲಾಗುವುದು. ಸಮರ್ಪಕ ಔಷಧ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ದಾಸ್ತಾನಿರುವ ಔಷಧ ಮಾತ್ರೆಗಳನ್ನು ಅಗತ್ಯಕ್ಕೆ ತಕ್ಕಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ನಿಗದಿತ ವೇಳೆಗೆ ತಲುಪಿಸಬೇಕು. ಅಂಗನವಾಡಿಗೆ ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳಿಗೂ ಜಂತು ಹುಳು ನಿವಾರಣಾ ಮಾತ್ರೆ ನೀಡಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net