ರೇಣುಕಾಚಾರ್ಯರು ಸನ್ಮಾರ್ಗದಲ್ಲಿ ಕೊಂಡೊಯ್ದ ಜಗದ್ಗುರು

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯ ನಿರೀಕ್ಷಕ ಧರ್ಮನಗೌಡ, ನಿವೃತ್ತ ಪ್ರಾಧ್ಯಾಪಕ ಚಂದ್ರಶೇಖರ್ ಶಾಸ್ತ್ರಿ, ಪ್ರಮುಖರಾದ ಸಾಲಿ ಸಿದ್ದಯ್ಯ ಸ್ವಾಮಿ, ಮಂಜುನಾಥ, ಎಚ್.ವಿ.ಶರಣಸ್ವಾಮಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅಭಿಪ್ರಾಯ
ಹೊಸಪೇಟೆ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಮಾತನಾಡಿ, ಜಗತ್ತಿನಲ್ಲಿ ಮೊದಲ ಬಾರಿಗೆ ಮಾನವ ಜನಾಂಗವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ಕೆಲಸ ಜಗದ್ಗುರು ಶ್ರೀ ರೇಣುಕಾಚಾರ್ಯರ ಮಾಡಿದರು ಎಂದು ತಿಳಿಸಿದರು.
ನಿವೃತ್ತ ಪ್ರಾಧ್ಯಾಪಕ ಚಂದ್ರಶೇಖರ್ ಶಾಸ್ತ್ರಿ ಮಾತನಾಡಿ, ಶ್ರೀ ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣರ ಮತ್ತು ಗುರುಗಳಲ್ಲಿ ಒಬ್ಬರು . ಇವರ ತತ್ವ, ಬದುಕಿನ ಚರಿತ್ರೆ ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಮಾಜದಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿದೆ. ಕನ್ನಡ ಭಾಷೆಯಲ್ಲಿ ಇವರ ಬದುಕು ಮತ್ತು ತತ್ವಗಳನ್ನು ವಿವರಿಸುವ ಹಲವು ಪುರಾಣಗಳು ಮತ್ತು ಗ್ರಂಥಗಳಿವೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಜಗದ್ಗುರು ರೇಣುಕಾಚಾರ್ಯರು ಹೇಳಿದ್ದಾರೆ, ಅವರು ಹಾಕಿ ಕೊಟ್ಟ ಮಾರ್ಗಕ್ಕೆ ನಾವೆಲ್ಲರೂ ನಡೆದುಕೊಂಡು ಹೋಗಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net