ಏಳು ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ

ಹರಪನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಆಯೋಜಿಸಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿಲಾಯಿತು.
ಹರಪನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಆಯೋಜಿಸಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿಲಾಯಿತು.
Published on
ಹರಪನಹಳ್ಳಿ: ಕನ್ನಡ ಸಾಹಿತ್ಯವನ್ನು ಜನಸಾಮಾನ್ಯರು ಅರಿಯುವಂತೆ ಮಾಡುವಲ್ಲಿ ಮತ್ತು ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ತಿನ ಸೇವೆ ಅನನ್ಯವಾಗಿದೆ ಎಂದು ತೆಗ್ಗಿನಮಠ ಸಂಸ್ಥಾನದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸೋಮವಾರ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಏಳು ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಕನ್ನಡ ಭಾಷೆಯನ್ನು ಉಳಿಸಿ- ಬೆಳೆಸಿ ಉತ್ತೇಜಿಸಲು ಕಟ್ಟಲಾಗಿರುವ ಈ ಸಂಸ್ಥೆ ಕರ್ನಾಟಕ ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತದೆ. ಸಮೃದ್ಧವಾಗಿರುವ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿ ನಾಡಿನ ಮೂಲೆ ಮೂಲೆಗೆ ಕನ್ನಡದ ಕಂಪನ್ನು ಪಸರಿಸುವ ಕಾರ್ಯವನ್ನು ಸದ್ದಿಲ್ಲದೆ ಮಾಡುತ್ತಿದೆ. ನಮ್ಮ ನಾಡಿನ ಜನರ ಜೀವನಾಡಿಯಂತೆ ಕೆಲಸ ಮಾಡುತ್ತಿದೆ ಎಂದರು.
ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. ನಮ್ಮ ತಂದೆ, ಮಾಜಿ ಡಿಸಿಎಂ ಎಂ.ಪಿ.ಪ್ರಕಾಶ್ ಅವರು ನಮಗೆ ಕನ್ನಡ ಶಾಲೆಗೆ ಸೇರಿಸುವ ಮೂಲಕ ಕನ್ನಡ ಪ್ರೇಮ ಮೆರೆದಿದ್ದಾರೆ. ಪಾಲಕರು ಮಕ್ಕಳಿಗೆ ಕನ್ನಡದಲ್ಲೇ ಓದುವುದು, ಬರೆಯುವುದನ್ನು ರೂಢಿ ಮಾಡಿಸಬೇಕು. ಅನ್ಯ ರಾಜ್ಯದಿಂದ ಬಂದವರಿಗೆ ಕನ್ನಡ ಕಲಿಸುವ ಕೆಲಸ ಮಾಡಿದರೆ ಕನ್ನಡ ಉಳಿಯುತ್ತದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು 112ನೇ ಸಂಸ್ಥಾಪನಾ ದಿನ ಆಚರಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಸಾಹಿತಿಗಳನ್ನು ಗುರುತಿಸಿ ಅವರನ್ನು ಮುನ್ನಲೆಗೆ ತರುವ ಕೆಲಸ ಮಾಡಿದೆ ಎಂದರು.
ನಾಡಿನ ಏಕೀಕರಣ ಹೋರಾಟಗಾರರು, ಖ್ಯಾತ ಸಾಹಿತಿಗಳು, ವಿದ್ವಾಂಸರು, ಆಡಳಿತಗಾರರು, ಅಧ್ಯಾಪಕರು ಮತ್ತು ಗಣ್ಯರ ಹೋರಾಟ ಮತ್ತು ಪಾಲ್ಗೊಳ್ಳುವಿಕೆ ಕಾರಣ ಹಾಗೂ ಸಾವಿರಾರು ಕನ್ನಡದ ಕಟ್ಟಾಳುಗಳ ಶ್ರಮ ಮತ್ತು ತ್ಯಾಗಗಳ ಫಲವಾಗಿ ಕನ್ನಡ ಸಾಹಿತ್ಯ ಪರಿಷತ್ತು ಉದಯವಾಯಿತು ಎಂದರು.
ಪ್ರಾಚಾರ್ಯ ಡಾ.ಕೆ.ಸತೀಶ ಮಾತನಾಡಿ. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒಗ್ಗಟ್ಟು ಮತ್ತು ಅಸ್ಮಿತೆಯ ಸಂಕೇತವಾಗಿದೆ. ನಾವೆಲ್ಲ ಒಂದಾಗಿ ಬಾಳಲು ನಮಗೆ ಸಾಹಿತ್ಯದ ಜ್ಞಾನ ಅಗತ್ಯವಾಗಿದೆ. ಇಂತಹ ಜ್ಞಾನ ನೀಡುವ ನಿಟ್ಟಿನಲ್ಲಿ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಶ್ರಮಿಸುತ್ತಿದ್ದು ಇಂದಿನ ತಲೆಮಾರಿನ ಯುವಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸತ್ವವನ್ನು ಪಡೆದುಕೊಂಡು ಅದರ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ, ಉಪನ್ಯಾಸಕ ಎಚ್.ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್ ವೀರಭದ್ರಪ್ಪ, ಶಿಕ್ಷಕರಾದ ಜಿ.ಮಂಜುಳಾ, ಮಲ್ಲಮ್ಮ ವಡ್ಡರ, ಶಶಿಕಲಾ ನಾಗಭೂಷಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net