ರಸಗೊಬ್ಬರ ಬೆಲೆ ಏರಿಕೆ ಹಿಂಪಡೆಯಲಿ

ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ರೈತರಿಂದ ಪ್ರತಿಭಟನೆ ನಡೆಯಿತು. ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಜಿ.ಮಲ್ಲಿಕಾರ್ಜುನ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಜೆ.ಉಮಾದೇವಿ, ಪ್ರಮುಖರಾದ ಹೇಮರೆಡ್ಡಿ, ಎಲ್.ಎಸ್.ರುದ್ರಪ್ಪ, ಜಗನ್ ರಾಜ್, ನಾಗರಾಜ್, ಹನುಮಂತಪ್ಪ, ನಲ್ಲಪ್ಪ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ
ಹೊಸಪೇಟೆ: ರಸಗೊಬ್ಬರಗಳ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಜೆ. ಕಾರ್ತಿಕ್ ಬಣ) ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.
ನಗರದ ಸಾಯಿಬಾಬಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರು, ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಜೆ.ಉಮಾದೇವಿ, ಅನ್ನದಾತನ ಹಿತದೃಷ್ಟಿಯಿಂದ ರಸಗೊಬ್ಬರಗಳ ಬೆಲೆಯನ್ನು ತಕ್ಷಣವೇ ಇಳಿಸಬೇಕು. ರಸಗೊಬ್ಬರಗಳ ಖರೀದಿಯ ಮೇಲಿರುವ ಲಿಂಕ್ ಆಧಾರಿತ ಗೊಬ್ಬರಗಳ ಕಡ್ಡಾಯ ನಿಯಮವನ್ನು ಕೈಬಿಡಬೇಕು. ಎಫ್.ಡಿ.ಐ ಗೊಂದಲವನ್ನು ಸರ್ಕಾರ ಶೀಘ್ರವಾಗಿ ಬಗೆಹರಿಸಬೇಕು" ಎಂದು ಒತ್ತಾಯಿಸಿದರು. ಅಲ್ಲದೆ, ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಮತ್ತು ರೈತರ ಪಂಪ್‌ಸೆಟ್‌ಗಳ ಖಾಸಗೀಕರಣ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.
ಬಳಿಕ ರೈತ ಮುಖಂಡರು ತಮ್ಮ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಪತ್ರವನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ರವಾನಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net