ಸಿದ್ದರಾಮಯ್ಯ ಪ್ರತಿಮೆ ಮರು ಪ್ರತಿಷ್ಠಾಪಿಸಿ

ಹುಡಾ ಮಾಜಿ ಅಧ್ಯಕ್ಷ ಎಲ್.ಸಿದ್ದನಗೌಡ ಒತ್ತಾಯ
Former HUDA Chairman L. Siddhana Gowda
ಹುಡಾ ಮಾಜಿ ಅಧ್ಯಕ್ಷ ಎಲ್.ಸಿದ್ದನಗೌಡ
Published on

ಹೊಸಪೇಟೆ: ಕಲಬುರಗಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಂಚಿನ ಪ್ರತಿಮೆಯನ್ನು ತೆರವುಗೊಳಿಸಿರುವ ಕ್ರಮವನ್ನು ಖಂಡನಿಯ ಎಂದು ಹುಡಾ ಮಾಜಿ ಅಧ್ಯಕ್ಷ ಎಲ್.ಸಿದ್ದನಗೌಡ ಹೇಳಿದರು.

ಸ್ಥಳೀಯ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲಬುರಗಿಯಲ್ಲಿ ಕುರುಬ ಸಮಾಜದಿಂದ ಸ್ಥಾಪಿಸಲಾದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಂಚಿನ ಪ್ರತಿಮೆಯನ್ನು ಯಾವುದೇ ನೋಟೀಸು ನೀಡದೆ ಅಲ್ಲಿನ ಪಾಲಿಕೆ ಅಧಿಕಾರಿಗಳು ರಾತ್ರೋರಾತ್ರಿ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿದರು.

ಅಲ್ಲದೆ ಪ್ರತಿಮೆ ಈ ಹಿಂದೆ ಇದ್ದ ಸ್ಥಳದಲ್ಲಿಯೇ ‌ಮರು ಪ್ರತಿಷ್ಠಾಪನೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ ಅವರು, ಘಟನೆ ಕುರಿತಂತೆ ರಾಜ್ಯ ಸರ್ಕಾರ ತನಿಖೆ ನಡೆಸಿ, ಘಟನೆಗೆ ಕಾರಣರಾದ ಕಲಬುರಗಿ ಪಾಲಿಕೆ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು. ಮಾಜಿ‌ ಸಿಎಂ ಸಿದ್ದರಾಮಯ್ಯ ಪ್ರತಿಮೆ ತೆರವು ಕುರಿತಂತೆ ಕುರುಬ ಸಂಘದ ರಾಜ್ಯ ಸಮಿತಿ ತೀರ್ಮಾನದಂತೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದ ಅವರು, ಸುದ್ದಿಗಾರರ ಪ್ರಶ್ನೆಗೆ ಉತ್ತರವಾಗಿ ನಗರದಲ್ಲಿ ಕೂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಸಮಾಜದಿಂದ ಸ್ಥಾಪನೆ ಮಾಡುವುದಾಗಿ ತಿಳಿಸಿದರು.

ರಾಜ್ಯ ಕುರುಬ ಸಂಘದ ನಿರ್ದೇಶಕ ಕೆ.ಎಂ.ಹಾಲಪ್ಪ, ಪ್ರಮುಖರಾದ ಮರಿ ರಾಮಣ್ಣ, ನಾಗರಾಜ ಮಜ್ಜಿಗಿ, ಕೆ.ಬಸವರಾಜ, ಆರ್.ಆರ್.ತಾಯಪ್ಪ, ಗಂಟೆ ಸೋಮಶೇಖರ್, ಬಂದಿ ಪಂಪಾಪತಿ, ಕೆ.ಆರ್.ವೆಂಕಟೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net