ಕಾಶಪ್ಪ ನವರಿಗೆ ಸಚಿವ ಸ್ಥಾನಕ್ಕಾಗಿ ವಿಶೇಷ ಪೂಜೆ

ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲದಲ್ಲಿ ಹುನಗುಂದ ಶಾಸಕ ಡಾ.ವಿಜಯಾನಂದ ಕಾಶಪ್ಪ ನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸೋಮವಾರ ಪ್ರಾರ್ಥನೆ ಸಲ್ಲಿಸಿದರು. ಪ್ರಮುಖರಾದ ಮಂಜುನಾಥ ನಿಟ್ಟಳ್ಳಿ, ನಾಗರಾಜ ಕುಕನಪಳ್ಳಿ, ಮಲ್ಲಿಕಾರ್ಜುರ, ವೀರಭದ್ರಪ್ಪ, ಶರಣಪ್ಪ ತಟ್ಟಿ, ಕೊಟ್ಟೂರೇಶ್ವರ, ರಾಜು, ಚಂದ್ರಶೇಖರ್, ವಿಕ್ರಂ, ಶ್ರೀಕಾಂತ, ಮನ್ಸೂರು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಹಂಪಿಯಲ್ಲಿ ಅಭಿಮಾನಿಗಳಿಂದ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ
ಹೊಸಪೇಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ ಡಾ.ವಿಜಯಾನಂದ ಕಾಶಪ್ಪ ನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಅಭಿಮಾನಿಗಳು ಹಾಗೂ ವೀರಶೈವ ಸಮಾಜದ ಬಂಧುಗಳು ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ಸಂಪುಟ ವಿಸ್ತರಣೆಯ ವೇಳೆ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಅಭಿಮಾನಿಗಳ ಪ್ರಬಲ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹಂಪಿ ವಿರೂಪಾಕ್ಷೇಶ್ವರನಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ವೀರಶೈವ ಸಮಾಜದ ಮುಖಂಡ ಎಂ.ಬಿ.ವಿರೇಶ್ವರ ಮಾತನಾಡಿ, ವಿಜಯಾನಂದ ಕಾಶಪ್ಪ ನವರು ವೀರಶೈವ ಸಮಾಜದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ನಿ಼ಷ್ಠಾವಂತ ಕಾರ್ಯಕರ್ತ ರಾಗಿದ್ದಾರೆ.ಅಲ್ಲದೆ ಪಕ್ಷಕ್ಕೆ ಸಾಕಷ್ಟು ದುಡಿದಿದ್ದಾರೆ. ಕ್ಷೇತ್ರದ ಹಾಗೂ ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಅವರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೂ ಹಾಗೂ ಸಮಾಜಕ್ಕೂ ಆನೆ ಬಲ ಬಂದAತಾಗುತ್ತದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಾಶಪ್ಪ ನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net