ಒತ್ತಡದ ಜೀವನಶೈಲಿಯಲ್ಲಿ ಕ್ರೀಡೆ ಅತ್ಯಗತ್ಯ

ಹೊಸಪೇಟೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬುಧವಾರ ಪತ್ರಕರ್ತರಿಗಾಗಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಟಾಸ್ ಹಾಕುವ ಮೂಲಕ ಚಾಲನೆ ನೀಡಿದರು. ಡಿವೈಎಸ್ಪಿ ಮಂಜುನಾಥ, ಡಿವೈಎಸ್ಪಿ ಪಿ.ಮುರಳಿಧರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ, ರಾಜ್ಯ ಸಮಿತಿ ಸದಸ್ಯ ಪಿ.ವೆಂಕೊಬಪ್ಪ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಭಿಪ್ರಾಯ
ಹೊಸಪೇಟೆ: ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಮಾಧ್ಯಮ ಮಿತ್ರರು ಕ್ರೀಡಾ ಮನೋಭಾವದಿಂದ ಭಾಗವಹಿಸಿ ತಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ಪತ್ರಿಕಾ ದಿನಾಚರಣೆ ನಿಮಿತ್ತ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿAದ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬುಧವಾರ ಪತ್ರಕರ್ತರಿಗಾಗಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ನಿರಂತರ ಸುದ್ದಿ, ಸಮಾಜದ ಕುಂದುಕೊರತೆಗಳ ವರದಿ ಮತ್ತು ಒತ್ತಡದ ಜೀವನಶೈಲಿಯಲ್ಲಿ ತೊಡಗಿರುವ ಪತ್ರಕರ್ತರಿಗೆ ಕ್ರೀಡೆ ಅತ್ಯಗತ್ಯ. ದೈನಂದಿನ ಮಾನಸಿಕ ಒತ್ತಡವನ್ನು ನಿವಾರಿಸಿಕೊಂಡು ಮನೋರಂಜನೆ ಹಾಗೂ ದೈಹಿಕ ಆರೋಗ್ಯ ಕಂಡುಕೊಳ್ಳಲು ಇಂತಹ ಕ್ರೀಡಾಕೂಟಗಳು ಸಹಕಾರಿ. ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಮಾಧ್ಯಮ ಮಿತ್ರರು ಕ್ರೀಡಾ ಮನೋಭಾವದಿಂದ ಭಾಗವಹಿಸಿ ತಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಬೇಕು ಎಂದರು.
ಹಿರಿಯ ಮತ್ತು ಕಿರಿಯ ಪತ್ರಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಕ್ರೀಡಾಂಗಣದಲ್ಲಿ ವೃತ್ತಿಪರ ಆಟಗಾರರಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ಮಾಧ್ಯಮ ಮಿತ್ರರು, ತಮ್ಮ ವೃತ್ತಿಜೀವನದ ಒತ್ತಡವನ್ನು ಬದಿಗೊತ್ತಿ ಸಂಭ್ರಮಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net