ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿ.ಪಂ. ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ನಡೆದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಪಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಪಂ ಮುಖ್ಯ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಲೆಕ್ಕಾಧಿಕಾರಿ ರುದ್ರಪ್ಪ ಅಕ್ಕಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಕ್ರೀಡಾಕೂಟದಲ್ಲಿ ಜಿಪಂ ಸಿಇಓ ಕರೆ

ಹೊಸಪೇಟೆ: ಕ್ರೀಡೆಯೆಂದರೆ ಕೇವಲ ಸ್ಪರ್ಧೆಯಲ್ಲ ಅದು ಆರೋಗ್ಯವನ್ನು ಕಾಪಾಡುವ ಒಂದು ಅಸ್ತçವಾಗಿದೆ ಎಂದು ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಹೇಳಿದರು.

ಜಿಲ್ಲಾ ಪಂಚಾಯಿತಿಯಿA ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೈನಂದಿನ ಕೆಲಸದ ಒತ್ತಡದಲ್ಲಿ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿಯಾಗಿದೆ. ಆರೋಗ್ಯವಂತ ದೇಹದಲ್ಲಿ ಆರೋಗ್ಯಯುತವಾದ ಮನಸ್ಸು ನೆಲೆಸಿರುತ್ತದೆ ಎಂಬ ನಾಣ್ಣುಡಿಯಂತೆ ಸಿಬ್ಬಂದಿ ಸಹ ಸದೃಢವಾಗಿದ್ದಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಕ್ರೀಡೆಯೆಂಬುವುದು ಸ್ಪೂರ್ತಿ, ಶಿಸ್ತು ಮತ್ತು ಆರೋಗ್ಯಕರ ಸ್ಪರ್ಧೆಯನ್ನು ತೋರಿಸುವ ಒಂದು ಉತ್ತಮ ವೇದಿಕೆಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ .ಬಾಲಕೃಷ್ಣ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಿನನಿತ್ಯ ಕೆಲಸದ ಒತ್ತಡದಲ್ಲಿ ದೈಹಿಕವಾಗಿ ಕುಗ್ಗಿರುತ್ತಾರೆ. ಕೆಲಸದ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ ಕ್ರೀಡೆ ಸಹಕಾರಿಯಾಗುವುದಲ್ಲದೇ ಪರಸ್ಪರ ಭಾಂದವ್ಯ ವೃದ್ದಿಸುತ್ತದೆ. ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೃಹತ್ ಮಟ್ಟದಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗುವುದು ಎಂದರು.

ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net