ಮನೆಮನೆಗೆ ಭೇಟಿ ನೀಡಲಿದ್ದಾರೆ ಸಿಬ್ಬಂದಿ

ಹೂವಿನಹಡಗಲಿಯಲ್ಲಿ ಪೋಲಿಯೋ ಅಭಿಯಾನಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಚಾಲನೆ ನೀಡಿದರು.
ಹೂವಿನಹಡಗಲಿಯಲ್ಲಿ ಪೋಲಿಯೋ ಅಭಿಯಾನಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಚಾಲನೆ ನೀಡಿದರು.
Published on
ಹೂವಿನಹಡಗಲಿ: ಮೂರು ಮೊಬೈಲ್ ತಂಡಗಳನ್ನು ರಚಿಸಲಾಗಿದ್ದು, ವಲಸೆ ಬಂದವರ ಮಕ್ಕಳನ್ನು ಗುರುತಿಸಿ ಪೋಲಿಯೋ ಲಸಿಕೆ  ಹಾಕಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಹೇಳಿದರು.
 ಪಟ್ಟಣದ  ತೇರು ಹನುಮಪ್ಪ ದೇವಸ್ಥಾನದ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಐದು ವರ್ಷದೊಳಗಿನ 17,257 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟು 198 ಬೂತ್‌ಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಯ 434 ಸಿಬ್ಬಂದಿ ನಿಯೋಜಿಸಲಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರು ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕೆಂದು ತಿಳಿಸಿದರು. 
ಮುಂದಿನ ಹಂತದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುವುದು. ಅನಾರೋಗ್ಯಕ್ಕೆ ತುತ್ತಾದ ಹಾಗೂ ಮನೆಯಿಂದ ಹೊರಬರಲಾಗದ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೆ ಬಂದು ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಸಾರ್ವಜನಿಕರು ಪೋಲಿಯೋಮುಕ್ತ ಸಮಾಜಕ್ಕೆ ಸಹಕರಿಸಬೇಕು ಎಂದರು. 
ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್, ಜಿಲ್ಲಾ ನೋಡಲ್ ಅಧಿಕಾರಿ ಡಾ.ಕೆ.ರಾಧಿಕಾ, ಡಾ.ಕೊಟ್ರಮ್ಮ, ಸಿಡಿಪಿಒ ರಾಮನಗೌಡ,  ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಬೀರಬ್ಬಿ ಮಹೇಶ್, ತಾಲೂಕು ಲಸಿಕಾ ನಿರ್ವಹಣೆ ಅಧಿಕಾರಿ ವೈ.ಶಿವಕುಮಾರ್ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶಿವಕುಮಾರ, ಪುರಸಭೆ ಆರೋಗ್ಯ ನಿರೀಕ್ಷಕ ಸೋಮಶೇಖರ್ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net