ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಠಾಣೆಯಲ್ಲಿ ಉತ್ತಂಗಿ ಗ್ರಾಮದ ಗುರುಶಾಂತ ರಾಜದೇಶಿ ಕೇಂದ್ರ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಭೇಟಿ ನೀಡಿದಾಗ ಕಾನ್‌ಸ್ಟೇಬಲ್ ವೀಣಾ ವಿದ್ಯಾರ್ಥಿಗಳಿಗೆ ಬಂದೂಕಿನ ಮಾಹಿತಿ ನೀಡಿದರು.
ಹೂವಿನಹಡಗಲಿ: ಅಪ್ರಾಪ್ತರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪಿಎಸ್‌ಐ ಜೆ.ಕೆ.ಅಬ್ಬಾಸ್ ಹೇಳಿದರು.
ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯ ಸಿಬ್ಬಂದಿ ಶ್ರಮಿಸುತ್ತಿದ್ದು. ಬಾಲಾಪರಾಧಿ ಪ್ರಕರಣಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನದಿಂದ ದೂರ ಉಳಿಯಬೇಕು ಎಂದು ಸಲಹೆ ನೀಡಿದರು.
ಪೊಲೀಸ್ ಸಿಬ್ಬಂದಿ ನಿತ್ಯ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿರುತ್ತಾರೆ. ಅಪ್ರಾಪ್ತರು ವಾಹನ ಚಲಾಯಿಸುವುದು ಕಾನೂನು ಬಾಹಿರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲು ಎಲ್ಲರೂ ಮುಂದಾಗಬೇಕಿದೆ. ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೆ ಪೊಲೀಸ್‌ಠಾಣೆಗೆ ಮಾಹಿತಿ ನೀಡಿ ಎಂದರು.
ಸಿಬ್ಬಂದಿ ಸಂಗಜ್ಜ, ವೀಣಾ, ಅಂಜಿನಪ್ಪ, ಮೂಗಪ್ಪ, ಬಸವರಾಜ, ಸತೀಶ್‌ನಾಯ್ಕ ಇತರರಿದ್ದರು.