ಪೊಲೀಸ್ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿರಿ

ಕೂಡ್ಲಿಗಿಯಲ್ಲಿ ಇತ್ತೀಚಿಗೆ ಮುಸುಕುಧಾರಿಗಳ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ರಾತ್ರಿ ಗಸ್ತು ತಿರುಗಿದರು.
ಕೂಡ್ಲಿಗಿಯಲ್ಲಿ ಇತ್ತೀಚಿಗೆ ಮುಸುಕುಧಾರಿಗಳ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ರಾತ್ರಿ ಗಸ್ತು ತಿರುಗಿದರು.
Published on
ಕೂಡ್ಲಿಗಿ: ಪಟ್ಟಣದಲ್ಲಿ ಇತ್ತೀಚೆಗೆ ತಡರಾತ್ರಿ ಮುಸುಕುಧಾರಿಗಳ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಗಸ್ತು ಹೆಚ್ಚಿಸಿದ್ದಾರೆ.
ಮುಸುಕುಧಾರಿಗಳ ದೃಶ್ಯ ವೈರಲ್ ಆಗಿದ್ದರಿಂದ ಸಾರ್ವಜನಿಕರು ಭಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಭಾನುವಾರ ರಾತ್ರಿ ಪಟ್ಟಣದ ಪ್ರಮುಖ ರಸ್ತೆ, ವಾರ್ಡ್‌ಗಳಲ್ಲಿ ಗಸ್ತು ತಿರುಗಿತು. ಯಾವುದೇ ಕಾರಣಕ್ಕೂ ಭಯಪಡಬಾರದು. ಅನುಮಾನಾಸ್ಪಾದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬೇಕೆಂದು ಕೋರಿದರು.
ನೆರೆಹೊರೆಯವರಲ್ಲಿ ಸಹಬಾಳ್ವೆ, ಸಹಭಾಗಿತ್ವ ಮುಖ್ಯವಾಗಿರುತ್ತದೆ. ತಡರಾತ್ರಿ ಅನುಮಾನಾಸ್ಪದ ವ್ಯಕ್ತಿಗಳ ತಿರುಗಾಟ ಕಂಡುಬಂದಲ್ಲಿ ತಕ್ಷಣವೇ ಮಾಹಿತಿ ನೀಡಬೇಕಾಗಿರುವುದು ಜನರ ಜವಾಬ್ದಾರಿಯಾಗಿದೆ. ಪೊಲೀಸ್ ಸಿಬ್ಬಂದಿಯೊಂದಿಗೆ ಸದಾ ಸಂಪರ್ಕದಲ್ಲಿದ್ದರೆ ತಕ್ಷಣವೇ ಸ್ಪಂದಿಸಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.
ಒಡವೆಗಳು, ಹಣ ಇತ್ಯಾದಿ ಬೆಲೆಬಾಳುವ ವಸ್ತುಗಳಿದ್ದರೆ ಬ್ಯಾಂಕ್ ಲಾಕರ್‌ಗಳಲ್ಲಿಡಬೇಕು. ಮನೆಗೆ ಬೀಗ ಹಾಕಿ ಬೇರೆಡೆ ಹೋಗುವ ಸಂದರ್ಭ ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ವಾರಗಟ್ಟಲೆ ಮನೆ ಬೀಗ ಹಾಕಿರುವುದು ಕಂಡಬಂದರೆ ನೆರೆ ಮನೆಯವರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net