ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆಯಾದರೆ ಕಠಿಣ ಕ್ರಮ

ಹೊಸಪೇಟೆ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಜಿಪಂ ಸಿಇಓ ನೋಂಗ್ಜಯ್ ಮಹ್ಮದ್ ಅಲಿ ಅಕ್ರಂ ಷಾ, ಡಿಎಚ್‌ಓ ಡಾ.ಎಲ್.ಆರ್.ಶಂಕರ್ ನಾಯ್ಕ, ಪಶುಸಂಗೋಪನೆ ಇಲಾಖೆ ಡಿಡಿ ರವಿ, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಅನುಷ್ಠಾನಾಧಿಕಾರಿ ಷಣ್ಮುಖ ನಾಯ್ಕ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎಚ್ಚರಿಕೆ
ಹೊಸಪೇಟೆ: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತ ಮತ್ತು ಹಾವು ಕಡಿತ ನಿರೋಧಕ ಲಸಿಕೆಗಳು ಕಡ್ಡಾಯವಾಗಿ ಲಭ್ಯವಿರಬೇಕು. ಯಾವುದೇ ಕೇಂದ್ರದಲ್ಲಿ ಲಸಿಕೆ ಕೊರತೆಯಾಗಿ ಚಿಕಿತ್ಸೆ ವಿಳಂಬವಾದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆಯಿಂದ ಹಿಡಿದು ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳವರೆಗೆ ಆಂಟಿ ರೇಬೀಸ್ ಮತ್ತು ಆಂಟಿ ಸ್ನೇಕ್ ವೆನಮ್ ಲಸಿಕೆಗಳ ಹೆಚ್ಚುವರಿ ದಾಸ್ತಾನಿರಬೇಕು. ನಾಯಿ ಅಥವಾ ಯಾವುದೇ ರೀತಿಯ ಹಾವು ಕಡಿತ ಉಂಟಾದಾಗ ಸಮಯ ವ್ಯರ್ಥ ಮಾಡದೇ ತಕ್ಷಣೆವೇ ಹತ್ತಿರದ ಆಸ್ಪತ್ರೆಗೆ ತೆರಳಿ ಪ್ರಥಮ ಚಿಕಿತ್ಸೆ ಪಡೆಯಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಹಾಗೂ ಹಾವು ಕಡಿತಕ್ಕೆ ಒಳಗಾದವರಿಗೆ ಚಿಕಿತ್ಸೆ ಉಚಿತವಾಗಿ ದೊರೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರು ಮೂಡನಂಬಿಕೆ ಒಳಗಾಗಿ ಯಾವುದೇ ಕಾರಣಕ್ಕೂ ನಾಟಿ ಔಷಧಿಗಳ ಮೊರೆ ಹೋಗಬಾರದು. ಇದರಿಂದ ಸಾವು ಸಂಭವಿಸುವ ಸಂಭವ ಹೆಚ್ಚಿರುತ್ತದೆ. ನಾಗರೀಕರು ಗೋಲ್ಡನ್ ಅವರ್ ಸಮಯದಲ್ಲಿ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net