ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಶ್ರಮ

ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಹಡಪದ ಹಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿದರು.
ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಹಡಪದ ಹಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿದರು.
Published on
ಕೂಡ್ಲಿಗಿ: ಬಸವಣ್ಣ ಅವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ್ದು, ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ತಾಲೂಕು ಕಚೇರಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ವಚನಗಳ ಮೂಲಕ ಶ್ರಮಿಸಿದ್ದಾರೆ ಎಂದರು.
ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಶರಣರು, ಸಂತರು, ದಾರ್ಶನಿಕರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ. ಅನುಭವ ಮಂಟಪದಲ್ಲಿ ಬಸವಣ್ಣ ಅವರಿಗೆ ಹಡಪದ ಅಪ್ಪಣ್ಣ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಕಾಯಕ ತತ್ವದಡಿ ಬದುಕು ರೂಪಿಸಿಕೊಳ್ಳುವುದೇ ಶರಣ ಆಶಯವಾಗಿದ್ದು, ಅವರು ಹಾಕಿ ಕೊಟ್ಟ ಮಾರ್ಗದಲ್ಲಿಯೇ ನಾವು ಸಾಗಬೇಕಿದೆ ಎಂದು ತಿಳಿಸಿದರು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಪಪಂ ಮಾಜಿ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಹಡಪದ ಸಮಾಜದ ತಾಲೂಕು ಅಧ್ಯಕ್ಷ ಚೌಡಪ್ಪ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಕರಿಯಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೋಟೇಶ್, ಬಣವಿಕಲ್ಲು ಎರಿಸ್ವಾಮಿ, ಜಿಲಾನ್, ಎಚ್.ಪ್ರಹ್ಲಾದ್, ಎಚ್.ವೀರಣ್ಣ, ರಮೇಶ್ ಹಾರಕಬಾವಿ, ಸಿದ್ದೇಶ್, ಶಿವು ಹಾರಕಬಾವಿ, ಶಿವಲಿಂಗಪ್ಪ, ಭೀಮಸಮುದ್ರ ಕರಿಯಪ್ಪ, ರಮೇಶ್, ಎಚ್.ವೆಂಕಟೇಶ್, ಕೊಟ್ರೇಶ್, ನಾಗರಾಜ್, ರಮೇಶಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net