ನಿರಂತರ ಶ್ರಮದಿಂದ ಸಾಧನೆ ಸಾಧ್ಯ

ಹೂವಿನಹಡಗಲಿಯ ಎಸ್‌ಆರ್‌ಎಂಪಿಪಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕನಕಪ್ರಿಯಾ ನಾಟ್ಯ ಕಲಾ ಕೇಂದ್ರದಿಂದ ಆಯೋಜಿಸಿದ್ದ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮದಲ್ಲಿ ಕಲಾವಿದ ಚೇತನ್ ನೃತ್ಯ ಪ್ರದರ್ಶಿಸಿದರು.
ಹೂವಿನಹಡಗಲಿಯ ಎಸ್‌ಆರ್‌ಎಂಪಿಪಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕನಕಪ್ರಿಯಾ ನಾಟ್ಯ ಕಲಾ ಕೇಂದ್ರದಿಂದ ಆಯೋಜಿಸಿದ್ದ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮದಲ್ಲಿ ಕಲಾವಿದ ಚೇತನ್ ನೃತ್ಯ ಪ್ರದರ್ಶಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಖಾ ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಸಲಹೆ
  • ಭರತ ನಾಟ್ಯ ರಂಗಪ್ರವೇಶ ಕಾರ್ಯಕ್ರಮ

ಹೂವಿನಹಡಗಲಿ: ಕಲೆ, ಸಂಗೀತ, ನೃತ್ಯ ಪರಂಪರೆಯಿಂದ ವಿಶ್ವದಲ್ಲಿ ಭಾರತ ಶ್ರೀಮಂತ ರಾಷ್ಟ್ರವಾಗಿದೆ. ವಿಶ್ವಕ್ಕೆ ಭರತನಾಟ್ಯ ಪರಿಚಯಿಸಿದೆ ಎಂದು ಶಾಖಾ ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಹೇಳಿದರು.

ಎಸ್‌ಆರ್‌ಎಂಪಿಪಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಭಾನುವಾರ ಕನಕಪ್ರಿಯಾ ನಾಟ್ಯ ಕಲಾ ಕೇಂದ್ರದಿಂದ ಭರತ ನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಮಾತನಾಡದರು. ನಿರಂತರ ಅಭ್ಯಾಸದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬಹುದು. ಶ್ರಮದಿಂದ ಸಾಧನೆ ಸಾಧ್ಯ. ಯುವ ಸಮೂಹ ಮೊಬೈಲ್ ಗೀಳಿನಿಂದ ನಮ್ಮ ಪರಂಪರೆಯನ್ನು ಮರೆಯುತ್ತಿದೆ.
ಮುಂದಿನ ಪೀಳಿಗೆಗೆ ದೇಶದ ಕಲೆ ಮತ್ತು ಸಂಸ್ಕೃತಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ನಂತರ ಕಲಾವಿದ ಚೇತನ್ ಭರತನಾಟ್ಯದ ವಿವಿಧ ನೃತ್ಯ ರೂಪಕ ಪ್ರದರ್ಶಿಸಿದರು. ಮಲ್ಲನಕೆರೆ ಮಠದ ಚನ್ನಬಸವ ಸ್ವಾಮೀಜಿ, ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಎ.ಕೊಟ್ರಗೌಡ. ವಿದ್ವಾನ್ ಕೆ.ನಾಗರಾಜ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net