ಮಹಿಳೆಯರ, ಮಕ್ಕಳ ಮತ್ತು ಯುವತಿಯರು ಜೀವನಚಕ್ರ ವಿಧಾನ ಹಾಗೂ ತಾಯಂದಿರು ಮತ್ತು ಮಕ್ಕಳ ಆರೋಗ್ಯವನ್ನು ಸುಧಾರಿಸುವುದು ಮತ್ತು ಅವರನ್ನು ಸಬಲಗೊಳಿಸುವ ಸದುದ್ದೇಶದಿಂದ ಸುಕ್ಷೇಮ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯು ಇವರ ಆರೋಗ್ಯದ ಮೇಲೆ ಕೆಟ್ಟ ಪ್ರಭಾವ ಬೀರುವ ಸಾಮಾಜಿಕ ಅಂಶಗಳು ಮತ್ತು ಆರೋಗ್ಯ ಸೇವೆಗಳನ್ನು ಪಡೆಯುವಂತೆ ಸಬಲರಾಗಲು ಇರುವ ಅಡೆ ತಡೆಗಳನ್ನು ಗುರುತಿಸಿ ನಿವಾರಿಸಲು ಸಹಕಾರಿಯಾಗಲಿದೆ. ಹಾಗೆಯೇ ವೈಯಕ್ತಿಕ, ಕುಟುಂಬ, ಸಮುದಾಯ ಮತ್ತು ಸಾಮಾಜಿಕ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಮುಖವಾಗಿ ಗರ್ಭಪೂರ್ವ ಆರೈಕೆ, ತಾಯಿ, ನವಜಾತ ಶಿಶು ಮತ್ತು ಮಕ್ಕಳ ಆರೋಗ್ಯವನ್ನು ಬಲಪಡಿಸುವುದರೊಂದಿಗೆ ಆರೋಗ್ಯ ಶಿಕ್ಷಣ ಮತ್ತು ಸಬಲೀಕರಣದ ಫಲಿತಾಂಶಗಳ ಮೇಲೂ ಗಮನಹರಿಸುತ್ತದೆ. ಆದ್ದರಿಂದ ಸುಕ್ಷೇಮ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ಗ್ರಾಮೀಣ ಪ್ರದೇಶ ಸೇರಿದಂತೆ ವಿಶೇಷವಾಗಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಈ ಯೋಜನೆ ಕುರಿತು ಜಾಗೃತಿ ಕಾರ್ಯಗಾರ ಆಯೊಜಿಸಿ ಅರಿವು ಮೂಡಿಸಬೇಕು ಎಂದರು.