ರುದ್ರಭೂಮಿ ಅತಿಕ್ರಮಣಕೋರರ ವಿರುದ್ಧ ಕ್ರಮವಹಿಸಿ

ನಿಚ್ಚಾಪುರದಲ್ಲಿ ವೀರಶೈವ ಸಮಾಜದ ರುದ್ರಭೂಮಿ ಅತಿಕ್ರಮಣ ಮಾಡಿಕೊಂಡವರ ವಿರುದ್ಧ ಕಾನೂನು ಕ್ರಮ ವಹಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಬಿ.ವಿ.ಗಿರೀಶ್ ಬಾಬುಗೆ ವೀರಶೈವ ಲಿಂಗಾಯತ ರುದ್ರಭೂಮಿ ಸೇವಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು
ನಿಚ್ಚಾಪುರದಲ್ಲಿ ವೀರಶೈವ ಸಮಾಜದ ರುದ್ರಭೂಮಿ ಅತಿಕ್ರಮಣ ಮಾಡಿಕೊಂಡವರ ವಿರುದ್ಧ ಕಾನೂನು ಕ್ರಮ ವಹಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಬಿ.ವಿ.ಗಿರೀಶ್ ಬಾಬುಗೆ ವೀರಶೈವ ಲಿಂಗಾಯತ ರುದ್ರಭೂಮಿ ಸೇವಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು
Published on
ಹರಪನಹಳ್ಳಿ: ನಿಚ್ಚಾಪುರದಲ್ಲಿ ರುದ್ರಭೂಮಿ ಅತಿಕ್ರಮಣ ಮಾಡಿಕೊಂಡವರ ವಿರುದ್ಧ ಕಾನೂನು ಕ್ರಮ ವಹಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಬಿ.ವಿ.ಗಿರೀಶ್ ಬಾಬುಗೆ ವೀರಶೈವ ಲಿಂಗಾಯತ ರುದ್ರಭೂಮಿ ಸೇವಾ ಸಮಿತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ನಿಚ್ಚಾಪುರ ಗ್ರಾಮದ 115/ಬಿ ಸರ್ವೇ ನಂಬರ್ ಜಮೀನಿನಲ್ಲಿ ಒಂದು ಎಕರೆ ಪ್ರದೇಶವನ್ನು ಸರ್ಕಾರ 2025ರಲ್ಲಿ ರುದ್ರಭೂಮಿಗಾಗಿ ವೀರಶೈವ ಸಮಾಜಕ್ಕೆ ನೀಡಿದೆ. ಸದರಿ ಜಾಗವನ್ನು ಭೂಗಳ್ಳರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ವಹಿಸುವಂತೆ ಒತ್ತಾಯಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net