ಔಷಧ ಪೂರೈಕೆಗೆ ಕ್ರಮ ವಹಿಸಿ

ಕೂಡ್ಲಿಗಿಯಲ್ಲಿ ಉಪ ತಹಸೀಲ್ದಾರ್ ರಾಘವೇಂದ್ರಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳ ನೌಕರರು ಮನವಿ ಸಲ್ಲಿಸಿದರು.
ಕೂಡ್ಲಿಗಿಯಲ್ಲಿ ಉಪ ತಹಸೀಲ್ದಾರ್ ರಾಘವೇಂದ್ರಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳ ನೌಕರರು ಮನವಿ ಸಲ್ಲಿಸಿದರು.
Published on
ಕೂಡ್ಲಿಗಿ: ನಮ್ಮ ನಾನಾ ಬೇಡಿಕೆಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು, ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳ ನೌಕರರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ರಾಘವೇಂದ್ರಗೆ ಮಂಗಳವಾರ ಸಲ್ಲಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಪಿ.ಪ್ರದೀಪ್ ಮಾತನಾಡಿ, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಔಷಧ ಸರಬರಾಜು ಮಾಡಬೇಕು. ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಸರಬರಾಜು ನಿಗಮ ಸಮರ್ಪಕವಾಗಿ ಔಷಧ ಸರಬರಾಜು ಮಾಡುವುದರಲ್ಲಿ ವಿಫಲವಾಗಿರುವುದರಿಂದ ಔಷಧೋಪಚಾರ ದೊರೆಯದೆ ರೋಗಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಸಂಘ ಮನವಿ ಮಾಡಿದ್ದರೂ ಸ್ಪಂದನೆ ಸಿಕ್ಕಿಲ್ಲ. ಇದರಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ರೋಗಿಗಳೊಂದಿಗೆ ಮೌಖಿಕ ಸಂಘರ್ಷ ಏರ್ಪಡುವಂತಾಗಿದೆ ಎಂದು ದೂರಿದರು.
ಸರ್ಕಾರ ಎಬಿಎಆರ್‌ಕೆ ಅನುದಾನದಲ್ಲಿ ಔಷಧ ಖರೀದಿಸಲು ತಿಳಿಸಿದೆ. ಆದರೆ, ಈ ಅನುದಾನ ತುರ್ತು ಸಂದರ್ಭದಲ್ಲಿ ಬಳಸಲು ಅವಕಾಶವಿದೆಯೇ ಹೊರತು ನಿರಂತರವಾಗಿ ಬಳಸಲು ಸಾಧ್ಯವಿಲ್ಲ. ಎಬಿಎಆರ್‌ಕೆ ಅನುದಾನವನ್ನು ಆಸ್ಪತ್ರೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಕಾರ್ಯಗಳಿಗೆ ಬಳಸಬೇಕಾಗಿರುವುದರಿಂದ ಅನುದಾನದ ಕೊರತೆ ಎದುರಾಗುತ್ತಿದೆ ಎಂದರು.
ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುವಡಿ ಮಾಡಲು ಸರ್ಕಾರದ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ 1973 ರಿಂದ ಇಲ್ಲಿಯವರೆಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿರುವುದಿಲ್ಲ. ಈ ಬಗ್ಗೆ ಶೀಘ್ರ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಿ.ಮಧು, ಡಾ.ಚಿರಂಜೀವಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ರಾಜ್ಯ ಪರಿಷತ್ ಸದಸ್ಯ ಆರ್.ಬಿ.ಬಸವರಾಜ, ಆರೋಗ್ಯ ಸಿಬ್ಬಂದಿ ಶ್ರೀನಿವಾಸ್, ಜಗದೀಶ್, ಮಂಜುಳಾ, ಪಿ.ಬಿ.ಗಿರಿಜಾ, ಶಿವಣ್ಣ, ಸುನೀಲ್ ಸಾತಿಹಾಳ್, ಭವ್ಯ, ಹುಲುಗಪ್ಪ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net