ಕಲುಷಿತ ನೀರು ಸರಬರಾಜಾಗದಂತೆ ಕ್ರಮ ವಹಿಸಿ

ಹೊಸಪೇಟೆ ಜಿ.ಪಂ. ಕಚೇರಿಯಲ್ಲಿ ಮಂಗಳವಾರ ಜಿ.ಪಂ. ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಂ ಷಾ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿ.ಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ದೀಪಾ ಇತರರಿದ್ದರು.
ಹೊಸಪೇಟೆ ಜಿ.ಪಂ. ಕಚೇರಿಯಲ್ಲಿ ಮಂಗಳವಾರ ಜಿ.ಪಂ. ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಂ ಷಾ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿ.ಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ದೀಪಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಜಿ.ಪಂ ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಂ ಷಾ ಸೂಚನೆ
ಹೊಸಪೇಟೆ: ಮಳೆಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತಾ ಕ್ರಮವಾಗಿ ಹಳೆಯ ಹಾಗೂ ಹಾನಿಗೊಳಗಾದ ಪೈಪ್‌ಲೈನ್‌ಗಳನ್ನು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಜಿ.ಪಂ. ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಂ ಷಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ. ಕಚೇರಿಯಲ್ಲಿ ಮಂಗಳವಾರ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಂತ್ರಿಕ ಕಾರಣಗಳಿಂದ ಕೊಳವೆಬಾವಿ ನೀರು ಪೂರೈಕೆಯಲ್ಲಿ ವ್ಯತ್ಯಯವಾದರೆ ತಕ್ಷಣ ಸರಿಪಡಿಸಬೇಕು. ದುರಸ್ತಿ ವಿಳಂಬವಾದರೆ ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರು ಒದಗಿಸಿ, ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಮಳೆಗಾಲದಲ್ಲಿ ಜಲಮೂಲಗಳು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಸ್ಥಳೀಯ ಸಂಸ್ಥೆಗಳು ವ್ಯಾಪಕ ಜಾಗೃತಿ ಮೂಡಿಸಬೇಕು. ಜತೆಗೆ, ಓವರ್ ಹೆಡ್ ಟ್ಯಾಂಕ್‌ಗಳ ಸ್ವಚ್ಛತೆ ಹಾಗೂ ನಿಯಮಿತ ಕ್ಲೋರಿನೇಶನ್ ಕಡ್ಡಾಯವಾಗಿ ನಡೆಯಬೇಕು ಎಂದರು.
ಇದೇ ವೇಳೆ, ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ಕಾಮಗಾರಿಗಳ ಮಂದಗತಿಯ ಪ್ರಗತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ 10 ದಿನಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿದ್ದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಹಗರಿಬೊಮ್ಮನಹಳ್ಳಿ ತಾಲೂಕಿನ ನೆಲ್ಕುದುರೆ ಗ್ರಾಮವನ್ನು ದಿನದ 24 ಗಂಟೆ ಶುದ್ಧ ಕುಡಿವ ನೀರು ಪೂರೈಕೆ ಗ್ರಾಮ ಎಂದು ಘೋಷಿಸಲು ಮನೆ ಮನೆ ನಳ ಸಂಪರ್ಕದ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net