ವಿವಿಧ ಬೇಡಿಕೆಗೆ ರಸ್ತೆಗಿಳಿದ ಟ್ಯಾಕ್ಸಿ ಚಾಲಕರು

ಹೊಸಪೇಟೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಿಐಟಿಯು ರಾಜ್ಯ ಸಂಚಾಲಕ ಕೆ.ಎಂ.ಸAತೋಷ್ ಕುಮಾರ್, ಪ್ರಮುಖರಾದ ಬಸವರಾಜ, ಎನ್.ಯಲ್ಲಾಲಿಂಗ, ವಿರೇಶ್, ಸುಧಾಕರ, ಭಾಷಾ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘದ ಬೃಹತ್ ಪ್ರತಿಭಟನೆ
ಹೊಸಪೇಟೆ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘದ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದಿಂದ ಆರಂಭವಾದ ಈ ಪ್ರತಿಭಟನಾ ರ‍್ಯಾಲಿಯು ವಾಲ್ಮೀಕಿ ವೃತ್ತ, ಗಾಂಧಿ ಚೌಕ್, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಬೀದಿಗಳ ಮೂಲಕ ಸಾಗಿ ಪುನೀತ್ ರಾಜಕುಮಾರ್ ವೃತ್ತದಲ್ಲಿ ಸಮಾವೇಶಗೊಂಡಿತು. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ತೀವ್ರಗೊಳಿಸುವುದಾಗಿ ಚಾಲಕರು ಎಚ್ಚರಿಸಿದರು. ಈ ಪ್ರತಿಭಟನೆಯಲ್ಲಿ ಜಿಲ್ಲೆಯ ನೂರಾರು ಚಾಲಕರು ಪಾಲ್ಗೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ರಾಜ್ಯ ಸಂಚಾಲಕ ಕೆ.ಎಂ.ಸAತೋಷ್ ಕುಮಾರ್ ಮಾತನಾಡಿ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್‌ಗಳಿಗೆ ಕಡ್ಡಾಯಗೊಳಿಸಿರುವ ಜಿಪಿಎಸ್ ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಕೂಡಲೇ ರದ್ದುಪಡಿಸಬೇಕು. ರೀಚಾರ್ಜ್ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು, ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಮತ್ತು ನಗರದ ಹದಗೆಟ್ಟ ರಸ್ತೆಗಳನ್ನು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net