ಭಗವದ್ಗೀತೆ ಸಾಮರಸ್ಯ ಮೂಡಿಸಲು ಸಹಕಾರಿ

ಹೊಸಪೇಟೆ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ರಾಜ್ಯಮಟ್ಟದ ಕಾರ್ಯಾಗಾರದ ಪೂರ್ವಭಾವಿ ಸಭೆಯಲ್ಲಿ ಶಿರಸಿಯ ಸೊಂದ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇAದ್ರ ಸರಸ್ವತಿ ಸ್ವಾಮೀಜಿ ಮಾತನಾಡಿದರು. ಶಾರದಾ ಗೀತಾಶ್ರಮದ ಸಮೇದಾನಂದ ಜಿ ಮಹಾರಾಜ, ಅಂಜನಾ ನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.

Published on

ಪ್ರಮುಖ ಮುಖ್ಯಾಂಶಗಳು

  • ಭಗವದ್ಗೀತೆ ಜಾಗತಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
  • ಶ್ರೀ ಗಂಗಾಧರೇAದ್ರ ಸರಸ್ವತಿ ಸ್ವಾಮೀಜಿ
ಹೊಸಪೇಟೆ: ಭಯೋತ್ಪಾದನೆ, ಜಾತಿ ಕಲಹ, ಅತ್ಯಾಚಾರ ಸೇರಿದಂತೆ ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಭಗವದ್ಗೀತೆ ಶಾಶ್ವತ ಪರಿಹಾರವಾಗಿದೆ ಎಂದು ಶಿರಸಿಯ ಸೊಂದ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇAದ್ರ ಸರಸ್ವತಿ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ನಗರದ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ರಾಜ್ಯಮಟ್ಟದ ಕಾರ್ಯಾಗಾರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯುವ ಜನಾಂಗ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಭಗವದ್ಗೀತೆಯ ಪಾರಾಯಣವು ವ್ಯಕ್ತಿಯ ಆರೋಗ್ಯದೊಂದಿಗೆ ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಲಿದೆ. ನೈತಿಕ ಅಧಃಪತನವನ್ನು ತಡೆಯಲು ಇದು ಏಕೈಕ ಮಾರ್ಗವಾಗಿದ್ದು, ಈ ಕಾರ್ಯದಲ್ಲಿ ಮಾತೆಯರ ಪಾತ್ರ ಮಹತ್ವದ್ದು ಎಂದರು..
ಶಿಕ್ಷಣದಲ್ಲಿ ನೈತಿಕತೆಯ ಕೊರತೆಯನ್ನು ನೀಗಿಸುವ ಉದ್ದೇಶದಿಂದ, ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಕಲಿಕೆ ಮತ್ತು ಆಸಕ್ತಿ ಮೂಡಿಸಲು ಈ ವರ್ಷ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಅಭಿಯಾನದ ಅಂಗವಾಗಿ ನವೆಂಬರ್‌ನಲ್ಲಿ ಕಲಿಕಾ ಕಾರ್ಯಕ್ರಮಗಳು ಹಾಗೂ ಡಿಸೆಂಬರ್‌ನಲ್ಲಿ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುವುದು. ಈ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆ ಆತಿಥ್ಯ ವಹಿಸಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net