

ಪ್ರಮುಖ ಮುಖ್ಯಾಂಶಗಳು
ಹೊಸಪೇಟೆ: ಧಾರವಾಡದಲ್ಲಿ ಯುವಜನರ ಹೋರಾಟ ನಡೆಸಿದವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯಿಂದ ವಿದ್ಯಾರ್ಥಿ ಸಂಘಟನೆಯಿಂದ ನಗರದ ಶಂಕರ್ ಆನಂದ್ ಸಿಂಗ್ ಕಾಲೇಜಿನಲ್ಲಿ ಪ್ರತಿಭಟನೆ ನಡೆಯಿತು.
ವಿಜಯನಗರ ಜಿಲ್ಲಾ ಸಂಚಾಲಕ ಜೆ.ಪಿ.ರವಿಕಿರಣ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಯುವಜನರ ಪ್ರತಿಭಟನೆ ನಡೆಯುತ್ತಿದೆ.
ಯುವಜನರ ನ್ಯಾಯಯುತ ಹೋರಾಟ ಹಾಗೂ ಪ್ರಜಾತಾಂತ್ರಿಕ ಹಕ್ಕಿನ ಮೇಲೆ ದಾಳಿ ಮಾಡಿರುವ ಪೊಲೀಸರು ಹೋರಾಟ ಸಮಿತಿಯ ಪ್ರಮುಖರನ್ನು ಬಂಧಿಸಿದ್ದಾರೆ. ಸರ್ಕಾರದ ಈ ಧಮನಕಾರಿ ನಡೆ ತೀವ್ರವಾಗಿ ಖಂಡಿನೆ. ಪೊಲೀಸರು ಕೇಳಿದ ಮಾಹಿತಿಯನ್ನು ಹಲವು ಬಾರಿ ನೀಡಿದರೂ, ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಮತ್ತು ಇದೀಗ ಯುವಜನರ ನ್ಯಾಯಯುತ ಹೋರಾಟವನ್ನು ಬೆಂಬಲಿಸಲು ಬಂದವನ್ನು ಕೂಡ ಬಂಧಿಸಲಾಗಿದೆ.
ಧಾರವಾಡ ಸೇರಿದಂತೆ ರಾಜ್ಯದ ವಿದ್ಯಾರ್ಥಿ- ಯುವಜನರು, ಹಾಗೂ ಪ್ರಜ್ಞಾವಂತ ಜನ ಸಮೂಹವು ಒಂದಾಗಿ ಸರ್ಕಾರದ ಈ ನಿರಂಕುಶ ಧೋರಣೆಯ ವಿರುದ್ಧ ಧ್ವನಿಯೆತ್ತಬೇಕು. ಮತ್ತು ಹೋರಾಡುವ ಪ್ರಜಾತಾಂತ್ರಿಕ ಹಕ್ಕಿನ ರಕ್ಷಣೆಗಾಗಿ ಹೋರಾಡಬೇಕು ಎಂದು ಕರೆ ನೀಡಿದರು.