ದೇಶ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವ ವಿಶ್ವ ಪಾರಂಪರಿಕ ತಾಣ ಹಂಪಿ, ಕಮಲಾಪುರ, ಹೊಸಪೇಟೆ ನಗರದ ಪ್ರಮುಖ ವೃತ್ತಗಳು ಹಾಗೂ ಹೆದ್ದಾರಿಯ ಆಯಕಟ್ಟಿನ ಜಾಗಗಳಲ್ಲಿ ಈ ಸಂಚಾರಿ ಕ್ಯಾಂಟೀನ್ ನಡೆಸಲು ಅವಕಾಶ ಕಲ್ಪಿಸಬೇಕು. ಈ ಮೂಲಕ ಪ್ರವಾಸಿಗರಿಗೆ ಶುಚಿ-ರುಚಿಯಾದ ಸ್ಥಳೀಯ ಮತ್ತು ಸಾಂಪ್ರದಾಯಿಕ ಆಹಾರ ಪದಾರ್ಥಗಳು ಕೈಗೆಟುಕುವ ದರದಲ್ಲಿ ಸಿಗುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.