ಕಾನಹೊಸಹಳ್ಳಿ: ಗ್ರಾಮದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಗ್ರಾಪಂನಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಗುರುವಾರ ನಡೆಯಿತು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮಾತನಾಡಿ, ಬಿಎಲ್‌ಒಗಳು ಮನೆ ಮನೆಗೂ ಬಂದು ವಿತರಿಸಿರುವ ಎನ್ಯುಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡಿ ಹಿಂದಿರುಗಿಸಬೇಕು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಆ.8 ರವರೆಗೆ ನಡೆಯಲಿದ್ದು, ಅರ್ಹರು ಮತದಾರರ ಪಟ್ಟಿಯಿಂದ ವಂಚಿತರಾಗಬಾರದು. ಹೀಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ತಿಳಿಸಿದರು.
ಗ್ರಾಪಂ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು. ಇದಕ್ಕೂ ಮುನ್ನ ಗ್ರಾಪಂ ಕಚೇರಿಯಲ್ಲಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಅಧ್ಯಕ್ಷತೆಯಲ್ಲಿ ಬಿಎಲ್‌ಒ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಭೆ ನಡೆಯಿತು.