ಹಾಸನÀ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಅನೇಕ ಹಳ್ಳಿಗಳ ಶಾಲೆಗಳನ್ನು ವಿಲೀನಗೊಳಿಸುವ ಅಧಿಕೃತ ಪಟ್ಟಿ ಹೊರಡಿಸಲಾಗಿದೆ. ಅಲ್ಲಿನ ಸ್ಥಳೀಯರ ವಿರೋಧ ನಡುಯು 15 ಹಳ್ಳಿಗಳಲ್ಲಿ ಓದುತ್ತಿರುವ 305 ಮಕ್ಕಳನ್ನು ಡಿ.ಎಂ.ಕುರ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸಬೇಕು ಎಂದು ಆದೇಶ ನೀಡಿದ್ದಾರೆ. ಇದಕ್ಕೆ ಎಸ್‌ಡಿಎಂಸಿ ಸದಸ್ಯರು ವಿರೋಧಿಸಿ ಶಿಕ್ಷಣ ಇಲಾಖೆ ಹಾಗೂ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದಾರೆ. ತಮ್ಮ ಮಕ್ಕಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸುವುದಿಲ್ಲ ನಮ್ಮ ಊರಿನಲ್ಲೇ ನಮ್ಮೂರ ಶಾಲೆ ಉಳಿಯಲಿ ಎಂದು ಹೋರಾಟಗಳು ನಡೆಯುತಿವೆ. ಆದ್ದರಿಂದ ರಾಜ್ಯ ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಸರ್ಕಾರದ ಈ ಬೂಟಾಟಿಕೆಯನ್ನು ಅರಿತು ನಮ್ಮೂರ ಶಾಲೆ ಉಳಿಸುವ ಪ್ರತಿರೋಧ ಚಳುವಳಿಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.