ಜೈನ ಸಮುದಾಯದ ಮೌಲ್ಯ ದಾರಿದೀಪ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಎಎಸ್ಪಿ ಮಂಜುನಾಥ, ಉಪವಿಭಾಗಾಧಿಕಾರಿ ವಿವೇಕಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣ ರಂಗಣ್ಣನವರ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಎಎಸ್ಪಿ ಮಂಜುನಾಥ, ಉಪವಿಭಾಗಾಧಿಕಾರಿ ವಿವೇಕಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣ ರಂಗಣ್ಣನವರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಭಗವಾನ್ ಮಹಾವೀರ ಜಯಂತಿಯಲ್ಲಿ ಎಎಸ್ಪಿ ಮಂಜುನಾಥ ಅಭಿಪ್ರಾಯ
ಹೊಸಪೇಟೆ: ಜೈನ ಸಮುದಾಯವು ಸಮಾಜದಲ್ಲಿ ಸಾಮರಸ್ಯದಿಂದ ಬದುಕುವುದನ್ನು ಕಲಿಸಿದೆ. ಅಹಿಂಸಾ ಮಾರ್ಗದಲ್ಲಿ ನಡೆಯಬೇಕೆನ್ನುವ ಸಮುದಾಯದ ಮೌಲ್ಯವು ಸಮಾಜಕ್ಕೆ ದಾರಿದೀಪ ಎಂದು ಎಎಸ್ಪಿ ಮಂಜುನಾಥ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.
ಆದಿಕವಿ ಪಂಪನಿAದ ಇಂದಿನವರೆಗೂ ಕನ್ನಡ ನಾಡು, ನುಡಿಗೆ ಜೈನ ಸಮುದಾಯ ಅಪಾರ ಕೊಡುಗೆ ನೀಡಿದೆ. ಜೈನ ಸಮುದಾಯದ ರಾಜರು ನಾಡಿನ ಕಲೆ, ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅನನ್ಯ. ಜೈನ ಧರ್ಮ ಎಂದಿಗೂ ಪರಕೀಯ ಧರ್ಮವಲ್ಲ. ಬದಲಿಗೆ ಈ ನಾಡಿಗೆ ಸೇರಿದ್ದು. ಜೈನ ಸಮುದಾಯವು ಕನ್ನಡ ನಾಡಿನೊಂದಿಗೆ ಭಾವನಾತ್ಮಕ ಸಂಬAಧ ಹೊಂದಿದೆ. ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರು ಸತ್ಯ, ಅಹಿಂಸೆಯ ಧರ್ಮ ಬೋಧಿಸಿದರು. ಅವರ ಅಹಿಂಸಾ ತತ್ವವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಅವರ ಆದರ್ಶಗಳನ್ನು ತಿಳಿಸುವುದರಿಂದ ಸಾಮಾಜಿಕ ಮೌಲ್ಯಗಳು ಗಟ್ಟಿಗೊಳ್ಳುತ್ತವೆ. ಸಮಾಜದಲ್ಲಿ ಶಾಂತಿ, ಸಾಮರಸ್ಯ ಬೆಳೆಯುತ್ತದೆ’ ಎಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net