ಜನನ-ಮರಣಗಳ ಅಂಕಿ ಅಂಶ ರಾಜ್ಯದ ಯೋಜನೆಗಳ ರೂಪಿಸುವಿಕೆಗೆ ದಿಕ್ಸೂಚಿಯಾಗಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸಬಾರದು. ಪ್ರತಿಯೊಂದು ಜನನ ಮತ್ತು ಮರಣ ಸಂಭವಿಸಿದ 21 ದಿನಗಳ ಒಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಹೆಸರು, ದಿನಾಂಕ, ಪೋಷಕರ ಹೆಸರು ಮತ್ತು ಸ್ಥಳದ ಮಾಹಿತಿಯನ್ನು ಅತ್ಯಂತ ನಿಖರವಾಗಿ ದಾಖಲಿಸಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ-ಮರಣಗಳ ಮಾಹಿತಿ ತಕ್ಷಣವೇ ಆಯಾ ಸ್ಥಳೀಯ ಸಂಸ್ಥೆ ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆಗಳಲ್ಲಿ ಆನ್‌ಲೈನ್ ಮೂಲಕ ರವಾನಿಸಬೇಕು. ಆರೋಗ್ಯ ಇಲಾಖೆ ಹಾಗೂ ನಗರಾಭಿವೃದ್ಧಿ ಅಥವಾ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.